ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗದಗ: ಶನಿವಾರ 'ಗಾನಯೋಗಿ ಗವಾಯಿ' ಅಂತ್ಯಕ್ರಿಯೆ (Puttaraj gawai | Gadag | Veereshwara Ashrma | Yeddyurappa)
Bookmark and Share Feedback Print
 
ರೋದಿಸುತ್ತಿದ್ದಾರೆ ಭಕ್ತರು
WD
ತೀವ್ರ ಅನಾರೋಗ್ಯದಿಂದ ಶುಕ್ರವಾರ ವಿಧವಶರಾದ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ (97) ಅವರ ಅಂತ್ಯಕ್ರಿಯೆ ಶನಿವಾರ ಸಂಜೆ 5 ಗಂಟೆಗೆ ವೀರೇಶ್ವರ ಪುಣ್ಯಾಶ್ರಮದ ಮಠದದಲ್ಲಿ ನೆರವೇರಿಸಲಾಗುವುದು ಎಂದು ಪುಣ್ಯಾಶ್ರಮದ ಮೂಲಗಳು ತಿಳಿಸಿವೆ.

ಪುಟ್ಟರಾಜ ಗವಾಯಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಡಲಾಗಿದೆ. ಹಾವೇರಿ, ಧಾರವಾಡ, ಗದಗ ಸೇರಿದಂತೆ ವಿವಿಧೆಡೆಯಿಂದ ಭಕ್ತರು ತಂಡೋಪ ತಂಡವಾಗಿ ಆಗಮಿಸಿ 'ನಡೆದಾಡುವ ದೇವರ' ಅಂತಿಮ ದರ್ಶನ ಪಡೆದರು.

ಶ್ವಾಸಕೋಶ, ನ್ಯೂಮೋನಿಯಾದಿಂದ ಬಳಲುತ್ತಿದ್ದ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಯಾಗಿದ್ದ ಪಂಡಿತ ಪುಟ್ಟರಾಜ ಗವಾಯಿ ಅವರು ಶುಕ್ರವಾರ ಮಧ್ಯಾಹ್ನ ಲಿಂಗೈಕ್ಯರಾಗಿದ್ದರು.

ಶ್ರೀಗಳ ಅಗಲಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ, ಸಿದ್ದಗಂಗಾ ಶ್ರೀ ಸೇರಿದಂತೆ ನಾಡಿನ ಹಿರಿಯ ಮಠಾಧೀಶರು, ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು.

ಗವಾಯಿ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಸರಕಾರಿ ಕಚೇರಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಹಾವೇರಿ, ಧಾರವಾಡದ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ.

ನಾಳೆ ಅಂತ್ಯಕ್ರಿಯೆ: ಗದಗ ನಗರದಲ್ಲಿ ಶನಿವಾರ ಬೆಳಿಗ್ಗೆ ಗವಾಯಿ ಅವರ ಪಾರ್ಥಿವ ಶರೀರದ ಮೆರವಣೆಗೆ ನಡೆಯಲಿದೆ. ಸಂಜೆ 5 ಗಂಟೆಗೆ ವೀರೇಶ್ವರ ಪುಣ್ಯಾಶ್ರಮದಲ್ಲಿರುವ ಪಂಡಿತ ದಿವಂಗತ ಪಂಚಾಕ್ಷರಿ ಗವಾಯಿಗಳ ಗದ್ದುಗೆ ಸಮೀಪದಲ್ಲಿಯೇ ಪುಟ್ಟರಾಜ ಗವಾಯಿಗಳ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆ ವೇಳೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಚಿತ್ರ: ತಮ್ಮ ಗುರುವರ್ಯರು ಗತಿಸಿದ ದುಃಖ ತಡೆಯಲಾರದೆ ರೋದಿಸುತ್ತಿರುವ ಭಕ್ತವೃಂದ.
ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ ಲಿಂಗೈಕ್ಯ
ಸಂಬಂಧಿತ ಮಾಹಿತಿ ಹುಡುಕಿ