ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಗೆ ಎದುರಾಳಿ ಪ್ರತಿಪಕ್ಷವೇ ಇಲ್ಲದಂತಾಗಿದೆ: ಅಶೋಕ್ (BJP | Siddaramaiah | Ashok | By election | JDS)
Bookmark and Share Feedback Print
 
ಕಡೂರು ಮತ್ತು ಗುಲ್ಬರ್ಗ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಪರಾಜಯಗೊಂಡಿದ್ದರಿಂದ ಆಡಳಿತರೂಢ ಬಿಜೆಪಿಗೆ ಎದುರಾಳಿ ಪ್ರತಿಪಕ್ಷವೇ ಇಲ್ಲದಂತಾಗಿದೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ಟೀಕಿಸಿದ್ದಾರೆ.

ನಗರದ ಕಎಸ್ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ನಗರ ಕೇಂದ್ರ ರೈಲ್ವೆ ನಿಲ್ದಾಣದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಎರಡು ಮಿನಿಬಸ್‌ಗಳ ಉಚಿತ ಸೇವೆಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನಾದರೂ ವಿಧಾನಸಭಾ ಅಧಿವೇಶನಗಳಲ್ಲಿ ಬಿಜೆಪಿ ಪಕ್ಷದ ವಿರುದ್ಧ ಟೀಕೆ ಮಾಡದೆ ಅಭಿವೃದ್ಧಿ ಪರ ಕಾರ್ಯಕ್ರಮಗಳ ಬಗ್ಗೆ ಕಾಂಗ್ರೆಸ್ ರಚನಾತ್ಮಕ ಸಲಹೆ ನೀಡಲಿ ಎಂದರು.

ಜೆಡಿಎಸ್ ಬಿಜೆಪಿಗೆ ಎದುರಾಳಿ ಪಕ್ಷವೇ ಅಲ್ಲ. ಅದೊಂದು ಪ್ರಾದೇಶಿಕ ಪಕ್ಷ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದು ಅವರ ಹಿರಿತನ ಪ್ರದರ್ಶಿಸಿದಂತಾಗಿದೆ. ಆದರೆ ಅವರು ಕಾಂಗ್ರೆಸ್ ಸಂಸ್ಕೃತಿಯನ್ನು ಅರ್ಥಮಾಡಿಕೊಂಡಿಲ್ಲ.ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕರ ಕುತಂತ್ರಕ್ಕೆ ಬಲಿಯಾಗಿದ್ದಾರೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ