ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 371ನೇ ವಿಧಿ ತಿದ್ದುಪಡಿಗೆ ಇಚ್ಛಾಶಕ್ತಿ ಕೊರತೆ ಕಾರಣ: ರೇವೂನಾಯಕ್ (Rehu nayak | BJP | Yeddyurappa | Hydarabad-karnataka)
Bookmark and Share Feedback Print
 
ಸಂವಿಧಾನದ 371ನೇ ವಿಧಿ ತಿದ್ದುಪಡಿ ಇದುವರೆಗೂ ಆಗದಿರಲು ರಾಜಕೀಯ ಇಚ್ಛಾಶಕ್ತಿ ಕೊರತೆ ಪ್ರಮುಖ ಕಾರಣ ಎಂದು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರೇವೂನಾಯಕ ಬೆಳಮಗಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ತ ನಗರದ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ಆರು ದಶಕಗಳ ನಂತರವೂ ಈ ಭಾಗ ಹಿಂದುಳಿದ ಹಣೆಪಟ್ಟಿಯಿದ ದೂರ ಆಗದಿರುವುದು ದುರದೃಷ್ಟಕರ. 371 ವಿಧಿ ಜಾರಿ ಈ ಭಾಗದ ಅಭಿವೃದ್ಧಿಗೆ ಪೂರಕವಾಗಲಿದೆ. ಇದಕ್ಕಾಗಿ ರಾಜ್ಯ ಸರಕಾರ ಸರ್ವ ರೀತಿಯ ಪ್ರಯತ್ನ ಮಾಡುತ್ತಿದೆ ಎಂದರು.

ಹೈದರಬಾದ್ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಬದ್ಧವಿದೆ. ಡಾ.ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯಿಂದ ನಾನಾ ಯೋಜನೆ ಜಾರಿಗೊಳಿಸಿದ್ದು, ಈ ಮೂಲಕ ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 1,204 ಕೋಟಿ ರೂ. ಒದಗಿಸಿದ್ದು, ಇದುವರೆಗೆ 984 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಭಾಗದ ವಿಕಾಸಕ್ಕೆ ಆದ್ಯತೆ ನೀಡುತ್ತಿರುವ ಸರಕಾರ ಗುಲ್ಬರ್ಗದಲ್ಲೇ ಸಚಿವ ಸಂಪುಟ ಸಭೆಯೂ ನಡೆಸಿದೆ. ಇಲ್ಲಿ ಹೊಸ ಯೋಜನೆ ಜಾರಿಗೆ ತರಲು ಸಂಪುಟ ಸಭೆ ಪೂರಕವಾಗಿದೆ ಎಂದು ವ್ಯಾಖ್ಯಾನಿಸಿದರು.

ರೈತರ ಆರ್ಥಿಕ ಸದೃಢತೆಗೆ ಹೈನೋದ್ಯಮ ಪೂರಕವಾಗಿದೆ. ಪಶುಪಾಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ 50 ಸಂಚಾರಿ ಪಶು ಚಿಕಿತ್ಸಾ ಘಟಕ ಶೀಘ್ರ ಆರಂಭಿಸಲು ಸರಕಾರ ನಿರ್ಧರಿಸಿದೆ ಎಂದು ಬೆಳಮಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ