ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವಾಯಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಮನವಿ: ಬೊಮ್ಮಾಯಿ (Gawai | Bharatha Rathna | Bommay | Yeddyurappa | Veereshwara Punyashrama)
Bookmark and Share Feedback Print
 
ಪಂಡಿತ ಪುಟ್ಟರಾಜ ಕವಿ ಗವಾಯಿಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಕೊಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ಮುಖ್ಯ ಮಂತ್ರಿಯವರ ಜತೆ ಚರ್ಚಿಸಲಾಗುವುದೆಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಶ್ರೀಗಳ ಅಗಲಿಕೆಯಿಂದ ನಾಡಿನ ಸಾಂಸ್ಕೃತಿಕ ಲೋಕ ಬಡವಾಗಿದೆ. ಶ್ರೀಗಳ ನಿಧನದಿಂದ ವೈಯಕ್ತಿಕವಾಗಿ ನನಗೂ ಬಹಳ ದುಃಖವಾಗಿದೆ. ಅವರು ಇನ್ನೂ ಕೆಲ ಕಾಲ ನಮ್ಮೊಂದಿಗಿದ್ದು ಮಾರ್ಗದರ್ಶನ ಮಾಡಬೇಕಿತ್ತು. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದರು.

ಶ್ರೀ ವೀರೇಶ್ವರ ಪುಣ್ಯಾಶ್ರಮದ ಗುರು-ಶಿಷ್ಯ ಪರಂಪರೆಯಿಂದ ಹಿಡಿದು ಸಾಹಿತ್ಯ, ಸಂಗೀತ, ನಾಟಕ ಮುಂತಾದ ಎಲ್ಲ ಪರಂಪರೆಗಳನ್ನು ಮುಂದುವರಿಸಿಕೊಂಡು ಹೋಗಲು ಪುಣ್ಯಾಶ್ರಮಕ್ಕೆ ಸರಕಾರದಿಂದ ಎಲ್ಲ ನೆರವು ನೀಡಲಾಗುವುದು. ಈ ಭಾಗದ ಜನಪ್ರತಿನಿಧಿಗಳು, ಭಕ್ತರು, ಸಾಹಿತಿಗಳು, ಸಂಗೀತ ಗಾರರ ಸಲಹೆ ಪಡೆದು ಪುಣ್ಯಾಶ್ರಮಕ್ಕೆ ಇನ್ನೂ ಏನೇನು ನೆರವು ಕೊಡಬಹುದು ಹಾಗೂ ಶ್ರೀಗಳ ಸ್ಮರಣೆಗಾಗಿ ಏನು ಮಾಡ ಬೇಕೆಂಬುದನ್ನು ತೀರ್ಮಾನಿಸಲಾಗುವುದೆಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ