ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇಕ್ಕಟ್ಟಿನಲ್ಲಿ ಸಿಎಂ; ಸಿ.ಟಿ.ರವಿ - ಅಪ್ಪಚ್ಚು ರಂಜನ್ ರಾಜೀನಾಮೆ (BJP | CT Ravi | Appahhu Ranjan | Yeddyurappa | Ishwarappa)
Bookmark and Share Feedback Print
 
ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಪಕ್ಷದಲ್ಲಿನ ಅಸಮಾಧಾನ ಶಮನಮಾಡಲಾಗುವುದು. ಅಲ್ಲದೇ ಎಲ್ಲ ಶಾಸಕರು ನಮ್ಮೊಂದಿಗಿದ್ದು ಯಾವ ಶಾಸಕರೂ ರಾಜೀನಾಮೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸಮಜಾಯಿಷಿ ನೀಡಿದ ಬೆನ್ನಲ್ಲೇ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ.ರವಿ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಂಗಳವಾರ ಸಂಜೆ ಸ್ಪೀಕರ್ ಅವರ ಆಪ್ತ ಕಾರ್ಯದರ್ಶಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸಚಿವ ಸಂಪುಟ ಪುನಾರಚನೆ ಕಸರತ್ತಿಗಾಗಿ ನವದೆಹಲಿಗೆ ತೆರಳಿ ಹೈಕಮಾಂಡ್ ವರಿಷ್ಠರ ಜತೆ ಚರ್ಚಿಸಿ ಗ್ರೀನ್ ಸಿಗ್ನಲ್ ಪಡೆಯುತ್ತಿದ್ದಂತೆಯೇ ರಾಜ್ಯರಾಜಕೀಯ ಪಡಸಾಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕರು, ಸಚಿವರು ತಮ್ಮ ಅಸಮಾಧಾನ ತೋಡಿಕೊಳ್ಳಲು ಆರಂಭಿಸುವ ಮೂಲಕ ಭಿನ್ನಮತ ಸ್ಫೋಟಗೊಂಡಿತ್ತು.

ಬಹುತೇಕ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವುದು ಮುಖ್ಯಮಂತ್ರಿ ಯಡಿಯೂರಪ್ಪನವರು ಇಕ್ಕಟ್ಟಿಗೆ ಸಿಲುಕಿದಂತಾಗಿದ್ದಾರೆ. ಏತನ್ಮಧ್ಯೆ ಸತತ ಮೂರು ಬಾರಿ ಗೆಲುವು ಸಾಧಿಸಿ, ನಿಷ್ಠೆಯಿಂದ ಕೆಲಸ ಮಾಡಿದರೂ ಯಾವುದೇ ಬೆಲೆ ಇಲ್ಲ ಎಂದು ಶಾಸಕ ಸಿ.ಟಿ.ರವಿ ಇಂದು ಬೆಳಿಗ್ಗೆಯೇ ಈಶ್ವರಪ್ಪನವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಆದರೆ ಈಶ್ವರಪ್ಪ ರವಿ ರಾಜೀನಾಮೆ ವಿಷಯವನ್ನು ತಳ್ಳಿಹಾಕಿ, ಯಾರು ಹೇಳಿದ್ದು ನಿಮಗೆ ಇದೆಲ್ಲಾ ಸುಳ್ಳು ಸುದ್ದಿ. ಎಲ್ಲಾ ಶಾಸಕರು ನಮ್ಮೊಂದಿಗೆ ಇದ್ದಾರೆ. ಯಾರೂ ರಾಜೀನಾಮೆ ಕೊಟ್ಟಿಲ್ಲ ಎಂದು ಸಮಜಾಯಿಷಿ ನೀಡಿದ್ದರು.

ಆ ಎಲ್ಲಾ ಬೆಳವಣಿಗೆಯ ನಡುವೆಯೇ ಸಿ.ಟಿ.ರವಿ ಸ್ಪೀಕರ್ ಅವರ ಆಪ್ತ ಕಾರ್ಯದರ್ಶಿಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅದರ ಬೆನ್ನಿಗೆ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಪುಟ ಪುನಾರಚನೆ ಬಿಕ್ಕಟ್ಟು ಮತ್ತಷ್ಟು ಕಗ್ಗಂಟಾದಂತಾಗಿದೆ.

ಮತ್ತೊಂದೆಡೆ ಸಚಿವರಾದ ಅರವಿಂದ ಲಿಂಬಾವಳಿ, ಶಿವನಗೌಡ ನಾಯಕ್, ಗೂಳಿಹಟ್ಟಿ ಶೇಖರ್ ತಮ್ಮನ್ನು ಸಂಪುಟದಿಂದ ಕೈಬಿಡಬಾರದೆಂದು ಆಗ್ರಹಿಸಿದ್ದಾರೆ. ಅಲ್ಲದೇ ಕಂದಾಯ ಸಚಿವ ಜನಾರ್ದನ ರೆಡ್ಡಿ, ಶ್ರೀರಾಮುಲು, ಜನಾರ್ದನ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಿ ಸಚಿವಗಿರಿಯಿಂದ ಕೈಬಿಡುತ್ತಿರುವ ಬಗ್ಗೆ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ನಿರ್ಧಾರವನ್ನು ಕೈಬಿಟ್ಟು, ಸ್ವಲ್ಪ ಸಮಯದ ನಂತರ ಪರಿಶೀಲಿಸುವಂತೆ ಜನಾರ್ದನ ರೆಡ್ಡಿ ಸಲಹೆ ನೀಡಿದ್ದಾರೆ.

ಬಿಜೆಪಿ ಅಧಿಕಾರದ ಗದ್ದುಗೆ ಏರಲು ಪಕ್ಷೇತರ ಶಾಸಕರ ಪಾತ್ರ ಮಹತ್ವದ್ದಾಗಿದೆ. ಆ ನಿಟ್ಟಿನಲ್ಲಿ ಗೂಳಿಹಟ್ಟಿ ಶೇಖರ್ ಆಗಲಿ, ಶಿವಾನಂದ ನಾಯಕ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬಾರದು ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ