ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಯೋಧ್ಯೆ ತೀರ್ಪು: ಸೆ.24,25ಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜಿಗೆ ರಜೆ (Ayodhya | Rama janma boomi | BJP | Yeddyurappa | Congress)
Bookmark and Share Feedback Print
 
ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರಕಾರ ಸೆಪ್ಟೆಂಬರ್ 24 ಮತ್ತು 25ರಂದು ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ.

ನಗರದಲ್ಲಿ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ನಿರ್ಧರಿಸಲಾಗಿದೆ. ಎಲ್ಲಾ ಧರ್ಮಿಯರು ಸರ್ವ ಧರ್ಮ ಸಮನ್ವಯತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ತೀರ್ಪಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವಂತೆ ಯಾವುದೇ ಘಟನೆಗಳು ನಡೆದರೂ ತಕ್ಷಣ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಆಯಾಕಟ್ಟು ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಅತಿಸೂಕ್ಷ್ಮ ವಿಷಯವಾದ ರಾಮಜನ್ಮಭೂಮಿ ವಿವಾದ ಕುರಿತು ಅಲಹಾಬಾದ್‌ನ ಲಕ್ನೋ ವಿಶೇಷ ಪೀಠ ಸೆ.24ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎಲ್ಲಾ ರಾಜ್ಯ ಸರಕಾರಗಳಿಗೂ ಪತ್ರ ಬರೆದು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿತ್ತು.
ಸಂಬಂಧಿತ ಮಾಹಿತಿ ಹುಡುಕಿ