ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಿರಿಯರ ಆಶೀರ್ವಾದದೊಂದಿಗೆ ಮುಂದುವರಿಯುವೆ: ರಾಮದಾಸ್ (SA Ramadass | H Vishwanath | Karnataka | BJP govt)
Bookmark and Share Feedback Print
 
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಅಡಗೂರು ಎಚ್. ವಿಶ್ವನಾಥ್, ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಸೇರಿದಂತೆ ಜಿಲ್ಲೆಯ ಎಲ್ಲ ಹಿರಿಯ ಮುಖಂಡರ ಮನೆಗೆ ತೆರಳಿ, ಅವರ ಸಲಹೆ-ಸೂಚನೆ ಪಡೆಯುವುದಾಗಿ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ತಿಳಿಸಿದರು.

ಸಚಿವರಾದ ಬಳಿಕ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ವರಿಷ್ಠರು ತಮ್ಮನ್ನು ಗುರುತಿಸಿ ಹೊಸ ಹೊಣೆ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ. ಜಿಲ್ಲೆಯ ಅಭಿವೃದ್ದಿಗಾಗಿ ಎಲ್ಲ ಪಕ್ಷದ ಶಾಸಕರು, ಮಾಜಿ ಸಚಿವರ ಮನೆಗೆ ತೆರಳಿ ಸಲಹೆ-ಸೂಚನೆ, ಮಾರ್ಗದರ್ಶನ ಪಡೆದು ಕಾರ್ಯನಿರ್ವಹಿಸುವೆ ಎಂದು ಹೇಳಿದರು.

ಎಚ್.ಎಸ್. ಶಂಕರಲಿಂಗೇಗೌಡರು ಪಕ್ಷದ ಹಿರಿಯರು. ಅವರಿಗೆ ನನ್ನ ಬಗ್ಗೆ ಬೇಸರವೇನಿಲ್ಲ. ಮನೆಗೆ ತೆರಳಿ ಚರ್ಚಿಸಿ ಮೈಸೂರು ಮತ್ತು ಚಾಮರಾಜನಗರ ಭಾಗದಲ್ಲಿ ಪಕ್ಷ ಸಂಘಟಿಸುವತ್ತ ಗಮನಹರಿಸುವೆ ಎಂದು ತಿಳಿಸಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ವೈದ್ಯ ಶಿಕ್ಷಣ ಖಾತೆ ಸಚಿವ ಎಸ್.ಎ. ರಾಮದಾಸ್ ಅವರಿಗೆ ಗುರುವಾರ ಸಂಭ್ರಮದ ಸ್ವಾಗತ ನೀಡಲಾಯಿತು. ವಿಧಾನ ಪರಿಷತ್ ಸದಸ್ಯರನ್ನು ಹೊರತು ಪಡಿಸಿ, ಉಳಿದ ಎಲ್ಲ ಮುಖಂಡರು, ನಿಗಮ, ಮಂಡಳಿ ಅಧ್ಯಕ್ಷರು, ಪಾಲಿಕೆ ಸದಸ್ಯರು ಸೇರಿದಂತೆ ಸಾವಿರಕ್ಕೂ ಹೆಚ್ಚು ಜನ ಅವರನ್ನು ಸಡಗರ-ಸಂಭ್ರಮದೊಂದಿಗೆ ಬರಮಾಡಿಕೊಂಡರು.

ಬೆಂಗಳೂರಿನಿಂದ ನೇರವಾಗಿ ಒಂಟಿಕೊಪ್ಪಲಿನಲ್ಲಿರುವ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಆಗಮಿಸಿದ ರಾಮದಾಸ್ ಅವರಿಗೆ ನೂರಾರು ಸಂಖ್ಯೆಯ ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿದರು. ಬಳಿಕ ಅವರು ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಸಂಬಂಧಿತ ಮಾಹಿತಿ ಹುಡುಕಿ