ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚುನಾಯಿತ ಸರಕಾರ ಉರುಳಿಸಲು ಪ್ರತಿಪಕ್ಷ ತಂತ್ರ: ಬೆಳಮಗಿ (Belamagi | BJP | Yeddyurappa | Congress | JDS | Karnataka)
Bookmark and Share Feedback Print
 
ಚುನಾಯಿತ ಸರಕಾರ ಉರುಳಿಸಲು ಕಾಂಗ್ರೆಸ್, ಜೆಡಿಎಸ್ ನಡೆಸುತ್ತಿರುವ ತಂತ್ರವನ್ನು ಗ್ರಂಥಾಲಯ ಸಚಿವ ರೇವೂನಾಯಕ ಬೆಳಮಗಿ ತೀವ್ರವಾಗಿ ಖಂಡಿಸಿದ್ದಾರೆ.

ನಾಡಿನ ಜನ ಬಿಜೆಪಿಗೆ ಆಶೀರ್ವಾದ ಮಾಡುವ ಮೂಲಕ ಐದು ವರ್ಷ ಅಧಿಕಾರ ಮಾಡುವ ಅವಕಾಶ ನೀಡಿದ್ದಾರೆ. ಆದರೆ ಪ್ರತಿಪಕ್ಷಗಳ ಮುಖಂಡರು ಹಿಂಬಾಗಿಲಿನಿಂದ ಸರಕಾರ ರಚಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವೂನಾಯಕ, ಕಾಂಗ್ರೆಸ್ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಈವರೆಗೂ ಸರಕಾರ ಬಿದ್ದುಹೋಗುತ್ತದೆ ಎಂದು ಹೇಳುವ ಮೂಲಕ ಜೆಡಿಎಸ್ ಜತೆ ಸೇರಿ ತಂತ್ರಗಾರಿಕೆ ನಡೆಸಿದೆ. ಆದರೆ ಈ ಉಭಯ ಪಕ್ಷಗಳ ಕನಸು ನನಸಾಗದು. ಮುಖ್ಯಮಂತ್ರಿ ಯಡಿಯೂರಪ್ಪ ಐದು ವರ್ಷಗಳ ಅವಧಿ ಪೂರ್ಣಗೊಳಿಸುವುದರಲ್ಲಿ ಸಂಶಯವಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದರು.

ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಯಾವುದೇ ಶಾಸಕರು ಬಿಜೆಪಿ ಸೇರಬಯಸಿದರೆ ಸ್ವಾಗತಿಸುವುದಾಗಿ ಹೇಳಿದ ಅವರು, ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಪಕ್ಷ ಬಲಪಡಿಸುವ ಹಿನ್ನೆಲೆಯಲ್ಲಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಕೈ ಬಲಪಡಿಸಲು ಯಾವುದೇ ತ್ಯಾಗಕ್ಕೂ ತಾವು ಸಿದ್ಧ ಎಂದರು.

ಕಾಂಗ್ರೆಸ್ ಶಾಸಕರಾದ ಮಾಲೀಕಯ್ಯ ಗುತ್ತೇದಾರ ಹಾಗೂ ರಾಜಶೇಖರ ಪಾಟೀಲ್ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಮಾಧ್ಯಮದ ಮೂಲಕ ಗೊತ್ತಾಗಿದೆ. ಹಾಗೊಂದು ವೇಳೆ ಅವರು ಬಿಜೆಪಿ ಸೇರುವುದಾದರೆ ಸ್ವಾಗತಿಸುವುದಾಗಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ