ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಮನೆಯಲ್ಲಿ ಕಾಣಿಸಿಕೊಂಡ 'ಕೈ' ಮಾಜಿ ಶಾಸಕ ರಾಮಚಂದ್ರ (Bjp | Congress | Jd(s) | S.V.Ramachandra | Operation kamala | Karnataka)
Bookmark and Share Feedback Print
 
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಆಪರೇಶನ್ ಕಮಲಕ್ಕೆ ಬಲಿಯಾದವರು ಎಂಬ ಊಹಾಪೋಹಕ್ಕೆ ಕಾರಣರಾಗಿ ನಾಪತ್ತೆಯಾಗಿದ್ದ ಜಗಳೂರಿನ ಕಾಂಗ್ರೆಸ್ ಶಾಸಕರಾಗಿದ್ದ ಎಸ್.ವಿ.ರಾಮಚಂದ್ರ, ಶುಕ್ರವಾರ ದಿಢೀರ್ ಆಗಿ ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಪ್ರತ್ಯಕ್ಷರಾಗುವ ಮೂಲಕ, ಬಿಜೆಪಿ ಸೇರುವ ಸುಳಿವು ನೀಡಿದರು.

ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ರಾಮಚಂದ್ರ ಆಗಮಿಸಿ, ಬಿಜೆಪಿ ಪಾಳೆಯ ಸೇರುವುದನ್ನು ಬಹುತೇಕ ಖಚಿತಪಡಿಸಿದ್ದು, ಸೋಮವಾರ ಅಧಿಕೃತವಾಗಿ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಅವರು ಯಾವುದೇ ಪಕ್ಷದ ಸದಸ್ಯರಲ್ಲ ಎಂದ ಬಿಜೆಪಿ...
ರಾಮಚಂದ್ರ ಈಗ ಯಾವುದೇ ಪಕ್ಷದ ಸದಸ್ಯರಲ್ಲ. ಸ್ವತಂತ್ರರಾಗಿರುವುದರಿಂದ ಯಾವುದೇ ಪಕ್ಷದ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಬಿಜೆಪಿಗೆ ಸೇರ್ಪಡೆಯಾಗಲು ಬಯಸುವ ಯಾರನ್ನೇ ಆಗಲಿ ನಾವು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಮುಖಂಡ ಧನಂಜಯ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಇದು ಆಪರೇಶನ್ ಕಮಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಅವರನ್ನು ಭೇಟಿ ಮಾಡಿದ ರಾಮಚಂದ್ರ, ಬಿಜೆಪಿ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಜೆಡಿಎಸ್‌ನ ಚೆನ್ನಪಟ್ಟಣ ಶಾಸಕ ಅಶ್ವತ್ಥ್, ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ನಾರಾಯಣ ಸ್ವಾಮಿ ಮತ್ತು ಜಗಳೂರು ಕಾಂಗ್ರೆಸ್ ಶಾಸಕ ರಾಮಚಂದ್ರ ಆಪರೇಶನ್ ಕಮಲಕ್ಕೆ ಬಲಿಯಾಗಿದ್ದಾರೆ ಎನ್ನುವ ವರದಿಗಳನ್ನು ಈ ಹಿಂದೆ ಬಿಜೆಪಿ ನಾಯಕರಾದ ಈಶ್ವರಪ್ಪ ಮತ್ತು ಧನಂಜಯ ಕುಮಾರ್ ತಳ್ಳಿಹಾಕಿದ್ದರು. ಆದರೆ, ಇದೀಗ ರಾಮಚಂದ್ರ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿರುವುದು ವಿರೋಧ ಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ