ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಂಇಎಸ್ ಕರಾಳ ದಿನಾಚರಣೆ; ಅನುಮತಿ ರದ್ದುಪಡಿಸಿದ ಸಿಎಂ (Karnataka CM | Yadyurappa | Karnataka Rajyotsava | MES)
Bookmark and Share Feedback Print
 
ಕನ್ನಡ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸಲು ನಿರ್ಧರಿಸಿದ್ದ ಕರಾಳ ದಿನಾಚರಣೆಯನ್ನು ರದ್ದುಗೊಳಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವ ದಿನವಾದ ಇಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆಗೆ ಜಿಲ್ಲಾಡಳಿಡವು ಷರತುಬದ್ಧ ಅನುಮತಿ ನೀಡಿತ್ತು. ಆದರೆ ಜಿಲ್ಲಾಡಳಿತ ನೀಡಿದ ಅನುಮತಿಯನ್ನು ಸಿಎಂ ರದ್ದು ಮಾಡಿದ್ದಾರೆ.

ಜಿಲ್ಲಾಡಳಿತವು ಎಂಇಎಸ್ ಕರಾಳ ದಿನಾಚರಣೆ ಅನುಮತಿ ಕಲ್ಪಿಸಿದ್ದನ್ನು ಖಂಡಿಸಿ ಹಲವು ಕನ್ನಡ ಪರ ಸಂಘಟನೆಗಳು ತೀವ್ರ ಅಕ್ರೋಶ ವ್ಯಕ್ತಪಡಿಸಿತ್ತಲ್ಲದೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು.

ಕನ್ನಡಪರ ಸಂಘಟನೆಗಳ ಸ್ವಾಗತ...
ರಾಜ್ಯೋತ್ಸವ ದಿನದಂದು ಎಂಇಎಸ್ ಹಮ್ಮಿಕೊಂಡಿದ್ದ ಕರಾಳ ದಿನಾಚರಣೆಗೆ ನೀಡಿದ್ದ ಅನುಮತಿಯನ್ನು ರದ್ದು ಪಡಿಸಿರುವ ಮುಖ್ಯಮಂತ್ರಿಯ ನಿರ್ಧಾರವನ್ನು ಕನ್ನಡ ಪರ ಸಂಘಟನೆಗಳು ಸ್ವಾಗತಿಸಿವೆ.

ರಾಜ್ಯ ಸರಕಾರ ಎಚ್ಚೆತ್ತುಕೊಂಡಿರುವುದು ಸಮಾಧಾನಕರ ಸಂಗತಿ. ನಾಡಿನ ಜನರ ಸ್ವಾಭಿಮಾನಕ್ಕೆ ಧಕ್ಕೆ ತರುವ ಶಕ್ತಿಗಳನ್ನು ದಮನ ಮಾಡಲು ಸರಕಾರ ಮುಂದಾಗಬೇಕು ಎಂದವರು ತಿಳಿಸಿದರು.

ಸಿಎಂ ಶುಭಾಶಯ....
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆಗೆ ಶುಭಕೋರಿದ್ದಾರೆ. ರಾಜ್ಯೋತ್ಸವವು ಕನ್ನಡಿಗರನ್ನು ಭಾವನಾತ್ಮಕವಾಗಿ ಬೆಸೆಯಲು ಸ್ಫೂರ್ತಿಯಾಗಲಿ ಎಂದವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಭಾಷಾ ಸಾಮರಸ್ಯಕ್ಕೆ ಸಿಎಂ ಕರೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ