ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರತಿಪಕ್ಷಗಳಿಗೆ ಇನ್ನೂ 20 ವರ್ಷ ಅಧಿಕಾರವಿಲ್ಲ: ಯಡಿಯೂರಪ್ಪ (BJP | Yeddyurappa | Congress | JDS | Bangalore)
Bookmark and Share Feedback Print
 
ಪ್ರತಿಪಕ್ಷದವರೇ ಕೇವಲ ಎರಡೂವರೆ ವರ್ಷಗಳಲ್ಲ. ಇನ್ನೂ 20 ವರ್ಷಗಳ ಕಾಲ ನೀವು ಪ್ರತಿಪಕ್ಷ ಸ್ಥಾನದಲ್ಲೇ ಇರುತ್ತೀರಿ. ನಿಮಗೆ ಆ ಅವಕಾಶ ಕೊಡುವುದೇ ಇಲ್ಲ. ನಾಡಿನ ಆರು ಕೋಟಿ ಜನರ ಆಶೀರ್ವಾದ ಇರುವವರೆಗೆ ನಾನು ಅಧಿಕಾರದಲ್ಲಿ ಇರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇಲ್ಲಿನ ನಂದಿ ರಂಗಮಂದಿರದಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಷ್ಟು ವರ್ಷಗಳ ಕಾಲ ಆಡಳಿತ ನಡೆಸಿರುವ ನಿಮ್ಮನ್ನು ಕಂಡು ಜನರು ಬೇಸತ್ತಿದ್ದಾರೆ. ನಿಮ್ಮ ಭ್ರಷ್ಟಾಚಾರ ಅವರನ್ನು ಕೆರಳಿಸಿಯೇ ನಿಮ್ಮನ್ನು ಪ್ರತಿಪಕ್ಷದಲ್ಲಿ ಕೂರಿಸಿದ್ದಾರೆ. ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದರೂ ಇಲ್ಲ-ಸಲ್ಲದ ಆರೋಪ ಮಾಡಿ ರಾಜೀನಾಮೆ ಕೇಳುವುದು ಸರಿಯಲ್ಲ. ನಿಮ್ಮ ಆರೋಪಗಳಿಗೆ ನಾನ್ಯಾಕೆ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದರು.

ತಾನು 30 ವರ್ಷಗಳ ಕಾಲ ಪ್ರತಿಪಕ್ಷದಲ್ಲಿದ್ದೆ ಎಂದ ಯಡಿಯೂರಪ್ಪ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಜವಾಬ್ದಾರಿಯಿಂದ ನಡೆದುಕೊಳ್ಳುವುದನ್ನು ಕಲಿಯಬೇಕು. ಅಭಿವೃದ್ಧಿಯಲ್ಲಿ ರಾಜ್ಯ ಸರ್ಕಾರ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರವೇ ಶಬ್ಬಾಸ್‌ಗಿರಿ ಕೊಟ್ಟರೂ ರಾಜ್ಯದ ಕಾಂಗ್ರೆಸ್ ಮುಖಂಡರು ಅದನ್ನು ಒಪ್ಪಲು ತಯಾರಿಲ್ಲ ಎಂದು ವ್ಯಂಗ್ಯವಾಡಿದರು.
ಸಂಬಂಧಿತ ಮಾಹಿತಿ ಹುಡುಕಿ