ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉದ್ಯಾನ ನಗರಿಯಲ್ಲಿ ಡಿ.24ರಿಂದ 3 ದಿನ 'ಕನ್ನಡ ಸಾಹಿತ್ಯ ಜಾತ್ರೆ' (Kannada sahithya sammelana | BJP | Yeddyurappa | National college)
Bookmark and Share Feedback Print
 
ಹಲವು ಏಳು-ಬೀಳುಗಳ ನಡುವೆ ಬಹು ನಿರೀಕ್ಷಿತ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಕೊನೆಗೂ ಕಸಾಪ ಅಧ್ಯಕ್ಷ ನಲ್ಲೂರು ಪ್ರಸಾದ್ ಮಂಗಳವಾರ ಘೋಷಿಸಿದ್ದಾರೆ.

ಡಿಸೆಂಬರ್ 24, 25 ಮತ್ತು 26ರಂದು ಮೂರು ದಿನಗಳ ಕಾಲ ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮ್ಮೇಳನ ನಡೆಯಲಿದ್ದು, ಸಮ್ಮೇಳನವನ್ನು ಯಶಸ್ವಿಗೊಳಿಸಲು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸರಕಾರ ಸರ್ವ ಸನ್ನದ್ಧವಾಗಿದೆ ಎಂದು ನಲ್ಲೂರು ತಿಳಿಸಿದರು.

ಸ್ವಾಗತ ಸಮಿತಿಯ ಅಧ್ಯಕ್ಷ ಹಾಗೂ ಗೃಹ ಸಚಿವ ಆರ್.ಅಶೋಕ್ ಹಾಗೂ ಸಮಿತಿ ಸಂಚಾಲಕ ವಿಧಾನ ಪರಿಷತ್ ಸದಸ್ಯ ಅಶ್ವತ್ಥ್ ನಾರಾಯಣ ಸೇರಿದಂತೆ ಇತರರೊಂದಿಗೆ ಚರ್ಚಿಸಿ ದಿನಾಂಕವನ್ನು ನಿರ್ಧರಿಸಲಾಗಿದೆ.

ಅಖಿಲ ಭಾರತ 77ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಕಚೇರಿ ಉದ್ಘಾಟನೆ ಮತ್ತು ಲಾಂಛನ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಸಮ್ಮೇಳನ ಅಧ್ಯಕ್ಷರಿಗೆ ಯಾವುದೇ ಗೌರವಧನ ನೀಡುವುದಿಲ್ಲ ಎಂದರು. ಅಧ್ಯಕ್ಷರಿಗೆ ಬೆಲೆ ಕಟ್ಟುವ ಬದಲು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದಂತಹ ಪರಮೋಚ್ಚ ಸ್ಥಾನದಲ್ಲಿ ಕೂರಿಸಿ, ಮೌಲ್ಯ ಕಟ್ಟಲಾಗುತ್ತದೆ ಎಂದರು.

1970ರಲ್ಲಿ ಬೆಂಗಳೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆದ ನಂತರ ನಾಲ್ಕು ದಶಕಗಳ ನಂತರ ಸಮ್ಮೇಳನ ನಡೆಯುತ್ತಿದೆ. ಇದನ್ನು ಎಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ