ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಿ.ಪಂ., ತಾ.ಪಂ. ಮೀಸಲಾತಿ ಘೋಷಣೆ; ಮಹಿಳೆಯರಿಗೆ ಮಣೆ (Zilla Panchayat | reservation pattern | Taluk Panchayat | polls | BJP Government)
Bookmark and Share Feedback Print
 
ಮುಂಬರುವ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 31 ಜಿಲ್ಲೆಗಳ 1013 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ಷೇತ್ರವಾರು ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.

ರಾಜ್ಯ ಚುನಾವಣಾ ಆಯೋಗ ಘೋಷಿಸಿರುವ ಪ್ರಕಾರ, ಶೇ.53ರಷ್ಟು ಮಹಿಳೆಯರಿಗೆ ಮೀಸಲಾತಿ ನೀಡಿದ್ದರೆ, ಶೇ.47ರಷ್ಟು ಪುರುಷರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟಿದೆ. ಅದೇ ರೀತಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಶೇ.18 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.5ರಷ್ಟು ಎಂದು ನಿಗದಿ ಮಾಡಿದೆ.

ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.50ಕ್ಕಿಂತಲೂ ಅಧಿಕ ಮೀಸಲಾತಿ ದೊರಕಿದಂತಾಗಿದೆ.

ಮೀಸಲಾತಿ ಪಟ್ಟಿಗೆ ವಿಪಕ್ಷಗಳಿಂದ ಆಕ್ರೋಶ, ಸುಪ್ರೀಂಗೆ ಹೋಗುವ ಬೆದರಿಕೆ:
ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಘೋಷಿಸಿರುವ ಮೀಸಲಾತಿ ಪಟ್ಟಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಸಿವೆ.

ಜಿ.ಪಂ. ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ಅವೈಜ್ಞಾನಿಕ ರೀತಿಯಲ್ಲಿ ಮೀಸಲಾತಿಯನ್ನು ನಿಗದಿ ಮಾಡಿದೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತ ಆರೋಪಿಸಿದರು. ಪ್ರಸಕ್ತವಾಗಿ ಘೋಷಿಸಿರುವ ಮೀಸಲಾತಿ ಪಟ್ಟಿಯಲ್ಲಿ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದ್ದು, ಸಾಮಾನ್ಯ ಕೆಟಗೆರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ