ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಧಿಕಾರಿಗಳು ಜಡತ್ವದಿಂದ ಹೊರಬರಲಿ: ಮಹಾದೇವ ಪ್ರಸಾದ್ (Maha deva prasad | Congress | BJP | Yeddyurappa)
Bookmark and Share Feedback Print
 
ಕ್ಷೇತ್ರದ ಶಾಸಕನಾಗಿ 'ಭಾಗ್ಯಲಕ್ಷಿ' ತಾಯಂದಿರಿಗೆ ಸೀರೆ ವಿತರಿಸಲು ಆಗಮಿಸುವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ ಎಂದು ಶಾಸಕ ಎಚ್.ಎಸ್.ಮಹಾದೇವ ಪ್ರಸಾದ್ ಹೇಳಿದ್ದಾರೆ.

ಆಡಳಿತಶಾಹಿ ನಿರ್ಲಕ್ಷ ಹಾಗೂ ಮೂಢನಂಬಿಕೆ ಕಾರಣದಿಂದ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಮುಖ್ಯಮಂತ್ರಿ ಅವರ ಆಗಮನದಿಂದ ಪ್ರಗತಿ ವೇಗ ಪಡೆದುಕೊಳ್ಳಲಿ. ಅಧಿಕಾರಿಗಳು ಜಡತ್ವದಿಂದ ಹೊರಬರಲಿ ಎಂಬ ಉದ್ದೇಶದಿಂದ ಜಿಲ್ಲಾ ಕೇಂದ್ರಕ್ಕೆ ಆಗಮಿಸಲಿ ಎಂದು ನಾವು ಒತ್ತಾಯಿಸಿದ್ದೆವು. ಕ್ಷೇತ್ರಕ್ಕೆ ಆಗಮಿಸುತ್ತಿರುವ ಬಗ್ಗೆ ನಮ್ಮ ಅಭ್ಯಂತರವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅವರು ಮುಖ್ಯಮಂತ್ರಿಯಾದ ನಂತರ ಒಮ್ಮೆಯೂ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿಲ್ಲ. ಬೇರೆಡೆ ಜಿಲ್ಲಾ ಕೇಂದ್ರದಲ್ಲೇ ಸೀರೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ. ಆದರೆ, ನಮ್ಮ ಜಿಲ್ಲೆಯಲ್ಲಿ ಮಾತ್ರ ತಾಲೂಕು ಕೇಂದ್ರವನ್ನು ಆಯ್ಕೆ ಮಾಡಿಕೊಂಡ ಬಗ್ಗೆ ಮಾತ್ರ ನಮ್ಮ ಆಕ್ಷೇಪವಿತ್ತು ಎಂದರು.

ನನ್ನ ಕ್ಷೇತ್ರದಲ್ಲೇ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯುತ್ತಿರುವುದರಿಂದ ಮುಖ್ಯಮಂತ್ರಿ ಅವರನ್ನು ಸ್ವಾಗತಿಸುತ್ತೇನೆ. ಇದೇ ಸಂದರ್ಭದಲ್ಲಿ ಪಟ್ಟಣದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಅಂಬೇಡ್ಕರ್ ಭವನ, ತೆರಕಣಾಂಬಿಯ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ, ಮಂಗಲ ಗ್ರಾಮದಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದಾರೆ ಎಂದರು.

ಪಟ್ಟಣದ ಸರಕಾರಿ ಉಪಕರಣ ಮತ್ತು ತರಬೇತಿ ಕಾರ್ಯಾಗಾರ ಮತ್ತು ಮೇಲುಕಾಮನಹಳ್ಳಿ ಬಳಿ 4.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ