ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹತ್ತು ವರ್ಷಗಳ ಭೂಹಗರಣ ತನಿಖೆಗೆ ಸಿದ್ದ: ಯಡಿಯೂರಪ್ಪ (BJP | Yeddyurappa | Congress | JDS | Mangalore | BDA)
Bookmark and Share Feedback Print
 
ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ನಡೆದಿರುವ ಎಲ್ಲಾ ಭೂ ಹಗರಣದ ಬಗ್ಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಘೋಷಿಸಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡಿಎ ಸೇರಿದಂತೆ ಡಿನೋಟಿಫಿಕೇಷನ್ ಹಗರಣಗಳ ಕುರಿತು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ನಾನು ಸಿದ್ದ ಎಂದರು. ಇದರಿಂದ ಕಳೆದ ಹತ್ತು ವರ್ಷಗಳಲ್ಲಿ ನಡೆದಿರುವ ಅವ್ಯವಹಾರ ಬಯಲಾಗಲಿ ಎಂದರು.

ಈ ಸಂಬಂಧ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು. ಈ ವಿಚಾರದಲ್ಲಿ ಪ್ರತಿಪಕ್ಷಗಳ ಮುಖಂಡರು ಸಲಹೆ-ಸೂಚನೆಗಳನ್ನು ಗೌರವಿಸುತ್ತೇನೆ. ಅದರ ಆಧಾರದ ಮೇಲೆಯೇ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಭೂ ಹಗರಣದ ತನಿಖೆ ನಡೆಸುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ನಡೆದಿರುವ ಭೂ ಹಗರಣಗಳ ಬಗ್ಗೆ ಕಾಂಗ್ರೆಸ್, ಜೆಡಿಎಸ್ ನಡೆಸುತ್ತಿರುವ ಹೋರಾಟವನ್ನು ಸ್ವಾಗತಿಸುವುದಾಗಿಯೂ ಅವರು ಈ ಸಂದರ್ಭದಲ್ಲಿ ಹೇಳಿದರು.

ಇನ್ನು ಮುಂದೆ ಕೈಗಾರಿಕೆಗಳಿಗೆ ಜಮೀನು ನೀಡುವಾಗ ಮತ್ತು ವಶಪಡಿಸಿಕೊಳ್ಳುವಾಗ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವುದಿಲ್ಲ. ಅಲ್ಲದೇ ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ