ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂ ಹಗರಣದ ಎಫೆಕ್ಟ್; ಯಡಿಯೂರಪ್ಪ ತಲೆದಂಡ? (BJP | Yeddyurappa | Nithin gadkari | Land scam | Advani)
Bookmark and Share Feedback Print
 
ಹಲವು ಅಗ್ನಿಪರೀಕ್ಷೆಯನ್ನು ಎದುರಿಸಿ ಅದರಲ್ಲಿ ಜಯ ಪಡೆದಿರುವೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಭೂ ಹಗರಣದ ಸಿಲುಕಿಕೊಳ್ಳುವ ಮೂಲಕ ಆಪತ್ತಿನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಅವರ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಕೂಡ ಗಂಭೀರ ಚಿಂತನೆ ನಡೆಸಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದಿನಕ್ಕೊಂದು ಭೂ ಹಗರಣಗಳು ಬಯಲಾಗುತ್ತಿದೆ. ಕಾನೂನು ಉಲ್ಲಂಘಿಸಿ ಕುಟುಂಬದವರು, ಸಂಬಂಧಿಕರಿಗೆ ಜಮೀನು ನೀಡಿರುವುದನ್ನು ಮಾಧ್ಯಮಗಳು ಪತ್ತೆ ಹಚ್ಚಿ ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಏತನ್ಮಧ್ಯೆ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಯಡಿಯೂರಪ್ಪನವರ ಮಕ್ಕಳು ಭಾಗಿಯಾಗಿದ್ದಾರೆನ್ನಲಾದ ಭೂ ಹಗರಣಕ್ಕೆ ಸಂಬಂಧಿಸಿದ ದಾಖಲೆ ತರಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ಪಕ್ಷ ಹಾಗೂ ಸರಕಾರದ ವರ್ಚಸ್ಸು ಕುಂದಿಸುತ್ತಿರುವ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬೇಕೆಂಬ ಬೇಡಿಕೆಯನ್ನು ಪಕ್ಷದ ಕೆಲವು ವರಿಷ್ಠರು ಮುಂದಿಟ್ಟಿದ್ದಾರೆ.

ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಷಯದಲ್ಲಿ ಬಿಜೆಪಿಯಲ್ಲೇ ವಿಭಿನ್ನ ಅಭಿಪ್ರಾಯಗಳು ಕೇಳಿಬರುತ್ತಿದೆ. ಸಂಸದೀಯ ಮಂಡಳಿ ಅಧ್ಯಕ್ಷ ಎಲ್.ಕೆ.ಅಡ್ವಾಣಿ ಸದ್ಯಕ್ಕೆ ತಟಸ್ಥ ನಿಲುವು ತಳೆದಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕಿ, ಬಳ್ಳಾರಿ ರೆಡ್ಡಿಗಳ ಗಾಡ್ ಮದರ್ ಸುಷ್ಮಾ ಸ್ವರಾಜ್ ಅಸಮಾಧಾನ ಹೊಂದಿದ್ದಾರೆ. ಅಷ್ಟೇ ಅಲ್ಲ ಯಡಿಯೂರಪ್ಪ ಅವರ ನಾಯಕತ್ವದ ವಿಷಯದಲ್ಲಿ ಆರ್ಎಸ್ಎಸ್ ಇಬ್ಭಾಗವಾಗಿದೆ.

ಯಡಿಯೂರಪ್ಪ ಪದಚ್ಯುತಿಗೆ ಅನಂತ್ ಕುಮಾರ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದು, ತಮ್ಮ ಬೆಂಬಲಿಗ ಶಾಸಕರು ಮತ್ತು ಸಚಿವರೊಂದಿಗೆ ಗುಪ್ತ ಸಮಾಲೋಚನೆಯಲ್ಲಿ ತೊಡಗಿರುವ ಅವರು, ಯಡಿಯೂರಪ್ಪ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದರೆ ಮುಂದೆ ಉಂಟಾಗಬಹುದಾದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷದ ಹೈಕಮಾಂಡ್ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆವರೆಗೂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಡಬಾರದು ಎಂಬ ನಿರ್ಧಾರಕ್ಕೆ ಬಂದಿತ್ತು. ಆದರೆ, ಸಂಸತ್‌ನಲ್ಲಿ ಭೂ ಹಗರಣ ಪ್ರತಿಧ್ವನಿಸಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಏತನ್ಮಧ್ಯೆ ನಾಯಕತ್ವ ಬದಲಾವಣೆಗೆ ತೀರ್ಮಾನ ಮಾಡಿದರೆ ಬದಲಿ ನಾಯಕರನ್ನಾಗಿ ಅನಂತ್ ಕುಮಾರ್ ಅಥವಾ ಜಗದೀಶ್ ಶೆಟ್ಟರ್ ಇವರಿಬ್ಬರಲ್ಲಿ ಯಾರು ಸಮರ್ಥರು ಎಂಬ ಬಗ್ಗೆ ಚಿಂತನೆ ನಡೆಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲವೊಂದು ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ