ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಭೂ ಹಗರಣ ಮುಜುಗರ ತಂದಿದೆ: ಕೆ.ಎಸ್.ಈಶ್ವರಪ್ಪ (Land Scam | Ishwarappa | BJP | Yeddyurappa | Congress | JDS)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಲೆ ವಿನಾಕಾರಣ ಮಾಡಿರುವ ಭೂ ಹಗರಣಗಳ ಆರೋಪ ತಮಗೂ ಮುಜುಗರ ತಂದಿದ್ದು, ಈ ಕುರಿತಂತೆ ಹೈಕಮಾಂಡ್ ಆಂತರಿಕವಾಗಿ ತನಿಖೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಅನರ್ಹಗೊಂಡ ಶಾಸಕರ ಕ್ಷೇತ್ರ ಅರಭಾವಿಯಲ್ಲಿ ಪಕ್ಷ ಬಲವರ್ಧನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ನಡೆದಿದೆ ಎನ್ನಲಾದ ಭೂ ಹಗರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳ ವರದಿ ಆಧರಿಸಿ ಯಡಿಯೂರಪ್ಪ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವುದು ಸೂಕ್ತವಲ್ಲ. ಭೂ ಹಗರಣ ಬಗ್ಗೆ ಸತ್ಯಾಸತ್ಯತೆಯ ವಿಚಾರಣೆ ನಡೆಸಿ ಆರೋಪಿ ಅಥವಾ ನಿರಪರಾಧಿ ಎಂದು ತೀರ್ಪು ನೀಡುವ ಅಧಿಕಾರ ನ್ಯಾಯಾಲಯಕ್ಕೆ ಮಾತ್ರ ಇದೆ ಎಂದರು.

ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಮೊದಲಿನಿಂದಲೂ ವಾಮಮಾರ್ಗ ಅನುಸರಿಸುತ್ತಲೇ ಬರುತ್ತಿವೆ. ಆದರೆ ಸರಕಾರ ಕೆಡವಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ತೀವ್ರ ಮುಖಭಂಗಕ್ಕೆ ಒಳಗಾಗಿರುವ ಪ್ರತಿಪಕ್ಷಗಳು ಭೂ ಹಗರಣದಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತರುವ ಮೂಲಕ ಅಪರಾ ಸ್ಥಾನದಲ್ಲಿ ನಿಲ್ಲಿಸುತ್ತಿವೆ ಎಂದು ಪ್ರತಿಪಕ್ಷಗಳ ವಿರುದ್ಧ ಅವರು ಹರಿಹಾಯ್ದರು.

ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷವನ್ನು ಬಲಪಡಿಸಲಾಗುವುದು. ಸರಕಾರ ಕೈಗೊಂಡ ಜನಪರ ಯೋಜನೆಗಳನ್ನು ಜನತೆಗೆ ಮನದಟ್ಟು ಮಾಡಿಕೊಡಲಾಗುವುದು ಎಂದು ಹೇಳಿದ ಅವರು, ರಾಜ್ಯದಲ್ಲಿ ಹಿಂದೆ ನಡೆದಿರುವ ಭೂ ಹಗರಣಗಳ ಸಮಗ್ರ ತನಿಖೆಗೆ ಸರಕಾರ ಈಗಾಗಲೇ ಆದೇಶ ನೀಡಿದೆ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ