ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೌಡ್ರ ಕುಟುಂಬದ ಹಗರಣಗಳ ಜಾಹೀರಾತು!: ಸಿಎಂ ಸಮರ (Deve gowda | BJP | Yeddyurappa | Kumaraswamy | Lokayuktha)
Bookmark and Share Feedback Print
 
NRB
ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ಜಂಗೀಕುಸ್ತಿ ಮುಂದುವರಿದಿದ್ದು, ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಹಗರಣವನ್ನು ದಿನಕ್ಕೊಂದು ಹಗರಣವನ್ನು ಶನಿವಾರದಿಂದಲೇ ಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ಬಯಲು ಮಾಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸುವ ಮೂಲಕ ರಾಜಕೀಯ ಸಮರವನ್ನು ಮುಂದುವರಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಮತ್ತು ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರದಲ್ಲಿದ್ದಾಗ ಮಾಡಿದ ಹಗರಣಗಳ ಬಗ್ಗೆ ದಿನಕ್ಕೊಂದರಂತೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಜನರ ಗಮನಕ್ಕೆ ತರಲಾಗುವುದು ಎಂದರು.

ಸರಕಾರ ಮತ್ತು ಪಕ್ಷದ ವತಿಯಿಂದ ಈ ಜಾಹೀರಾತು ನೀಡಲಾಗುವುದು. ಜಿಲ್ಲಾ ಪಂಚಾಯ್ತಿ ಚುನಾವಣೆ ವೇಳೆ ಪ್ರತಿಪಕ್ಷಗಳ ಭೂ ಹಗರಣದ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು.

ಹಗರಣದ ವಿಷಯಕ್ಕೆ ಸಂಬಂಧಿಸಿದಂತೆ ದೇವೇಗೌಡರ ಕುಟುಂಬಕ್ಕೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ವ್ಯಂಗ್ಯವಾಡಿದ ಅವರು, ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ 26.6ಎಕರೆ ಭೂಮಿಯನ್ನು ಸಾವಿತ್ರಮ್ಮ (ಎಚ್‌ಡಿಕೆ ಚಿಕ್ಕಮ್ಮ) ಎಂಬವರಿಗೆ ಡಿನೋಟಿಫೈ ಮಾಡಿ ನಂತರ ಅವರಿಂದ ಕುಮಾರಸ್ವಾಮಿ ಆ ಭೂಮಿಯನ್ನು ದಾನವಾಗಿ ಪಡೆದಿರುವುದಾಗಿ ಆರೋಪಿಸಿದರು.

ಅಪ್ಪ-ಮಕ್ಕಳು ಪ್ರತಿದಿನ ನನ್ನ ವಿರುದ್ಧ ಹಾಗೂ ಸರಕಾರದ ಬಗ್ಗೆ ಅಪಪ್ರಚಾರ ಮಾಡುತ್ತಲೇ ಇದ್ದಾರೆ. ಗೌಡರ ಕುಟುಂಬ ಕೂಡ ಸಾಚಾ ಅಲ್ಲ. ಅವರು ಕೂಡ ಸಾಕಷ್ಟು ಕೆರೆ, ಭೂಮಿ ಒತ್ತವರಿ ಮಾಡಿಕೊಂಡಿದ್ದಾರೆ. ಹೊಳೆನರಸೀಪುರದಲ್ಲಿ 82.1ಎಕರೆ ಭೂಮಿಯನ್ನು ಅಕ್ರಮವಾಗಿ ಸಂಪಾದಿಸಿಕೊಂಡಿದ್ದಾರೆ. ಇದನ್ನು ಸರಕಾರ ಮರುವಶಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳುತ್ತಿದೆ ಎಂದರು.

ಆದರೆ ಈ ಸಂದರ್ಭದಲ್ಲಿ ಲೋಕಾಯುಕ್ತ ಮತ್ತು ರಾಜ್ಯಪಾಲರ ಹೇಳಿಕೆ ಕುರಿತು ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೆಚ್ಚು ಒತ್ತು ನೀಡುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ