ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಸೇಡಿನ ರಾಜಕಾರಣ ಮಾಡ್ತಿದ್ದಾರೆ: ಪರಮೇಶ್ವರ್ ಕಿಡಿ (Parameshwar | KPCC | Mangalore | Congress | Yeddyurappa)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇಡಿನ ರಾಜಕೀಯ ನಡೆಸುತ್ತಿದ್ದು, ಸರಕಾರಿ ಅಧಿಕಾರಿಗಳನ್ನು ಬಳಸಿಕೊಂಡು ಹಗರಣ ಹೊರಗೆಳೆಯುವ ಬೆದರಿಕೆ ಹಾಕುವ ಮೂಲಕ ಪ್ರತಿಪಕ್ಷದ ಬಾಯಿಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಕರಾವಳಿ ಜಿಲ್ಲೆಗೆ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿ, ಗೌಡ ಕಾಲದ ತುಂಡು ಗುತ್ತಿಗೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಮೂಲಕ ಸಿಎಂ ಸೇಡಿನ ರಾಜಕೀಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಲೋಕಾಯುಕ್ತದಲ್ಲಿ 30 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ಬಾಕಿ ಇದೆ. ಅದರಲ್ಲಿ ಜೆಡಿಎಸ್ ನಾಯಕರ ವಿರುದ್ಧದ ಏಳು ಪ್ರಕರಣಗಳ ಮಾಹಿತಿ ಕೇಳಿರುವುದು ಆ ಸಂಸ್ಥೆಗೂ ಒತ್ತಡ ಹಾಕಿದ ಹಾಗೆ. ಜೊತೆಗೆ ಪ್ರತಿಪಕ್ಷ ನಾಯಕರನ್ನು ಬೆದರಿಸುವ ತಂತ್ರ ಎಂದು ಸಿಎಂ ವಿರುದ್ಧ ಹರಿಹಾಯ್ದರು.

ಮುಖ್ಯಮಂತ್ರಿಗಳಿಗೆ ಮಾತನಾಡದಂತೆ ವೈದ್ಯರು ಸಲಹೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಮೌನವಾಗಿದ್ದರೆ ರಾಜ್ಯಕ್ಕೆ ಒಳ್ಳೆಯದು. ಈ ಸರಕಾರ ಬಂದಾಗಿನಿಂದ ಈ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ ಎಂದರು.

ಕಾಂಗ್ರೆಸ್ ಒಡೆದ ಮನೆಯಲ್ಲ, ಪಕ್ಷದಲ್ಲಿ ಯಾವುದೇ ಒಡಕಿಲ್ಲ. ಏನಿದ್ದರೂ ಅದು ಭಿನ್ನಾಭಿಪ್ರಾಯವಷ್ಟೇ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಹಜ ಎಂದ ಅವರು, ಮುಂದಿನ ಜಿಲ್ಲಾ ಪಂಚಾಯ್ತಿ ಚುನಾವಣೆಯನ್ನು ಪಕ್ಷ ಒಗ್ಗಟ್ಟಿನಿಂದ ಎದುರಿಸುತ್ತಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ