ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪತ್ರಿಕೆ, ಟಿವಿ ಸುದ್ದಿ ನಂಬಬೇಡಿ!; ಯಡಿಯೂರಪ್ಪ ಮನವಿ (BJP | Yeddyurappa | Congress | JDS | Kumaraswamy)
Bookmark and Share Feedback Print
 
ಪತ್ರಿಕೆಗಳನ್ನು ಓದಿ, ಟಿವಿ ಚಾನೆಲ್‌ಗಳು ಪ್ರಸಾರ ಮಾಡುವ ಸುದ್ದಿ ನೋಡಿ ಯಾವುದೇ ತೀರ್ಮಾನಕ್ಕೆ ಬರಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿ, ಲಂಚ ಮುಕ್ತ ರಾಜ್ಯವನ್ನಾಗಿ ಮಾಡುವ ಆಶಯ ವ್ಯಕ್ತಪಡಿಸಿದರು.

ರೈತರಿಗೆ ಶೇ.1ರ ಬಡ್ಡಿ ದರದಲ್ಲಿ ಸಾಲ ನೀಡುವ ವ್ಯವಸ್ಥೆಯನ್ನು ಮುಂದಿನ ವರ್ಷದಿಂದಲೇ ಜಾರಿಗೊಳಿಸುವುದಾಗಿ ಹೇಳಿದರು. ಯಲಹಂಕದ ಸಿದ್ದಶ್ರೀಧಾಮ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ ಮಹಾರಾಜರ ಕಾಲದಲ್ಲೂ ಉತ್ತಮ ಕೆಲಸಗಳನ್ನು ಮಾಡಿದರೆ ಟೀಕೆಗಳನ್ನು ಎದುರಿಸಬೇಕಾಗಿತ್ತು. ಈಗಲೂ ಕೂಡ ಒಳ್ಳೆಯ ಕೆಲಸ ಮಾಡಿದರೂ ಆರೋಪ ಎದುರಿಸಬೇಕಾಗುತ್ತದೆ ಎಂದರು.

ಸರಕಾರ ಹಾಗೂ ಪ್ರತಿಪಕ್ಷಗಳು ರಥದ ಚಕ್ರಗಳಿದ್ದಂತೆ. ಆದರೆ ಅದೇಕೋ, ಪ್ರತಿಪಕ್ಷಗಳು ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸುತ್ತಿಲ್ಲ. ಕೇವಲ ಟೀಕೆಗಳನ್ನು ಮಾಡುವುದರಲ್ಲಿಯೇ ಕಾಲ ಕಳೆಯುತ್ತಿವೆ ಎಂದು ಆರೋಪಿಸಿದರು.

ವಾರದಲ್ಲಿ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡು ಜನರ ಸಂಕಷ್ಟಗಳನ್ನು ಅರಿತು ಪರಿಹರಿಸಲು ಕಾರ್ಯೋನ್ಮುಖನಾಗುವೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ