ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಸೋತ ಗ್ರಾಮಕ್ಕೆ ಕಾಲಿಡಲ್ಲ: ಯಡಿಯೂರಪ್ಪ ಶಪಥ (BJP | Yeddyurappa | Election | Congress | JDS | Deve gowda)
Bookmark and Share Feedback Print
 
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ತರಲು ಸಾಧ್ಯವಾಗದಿದ್ದರೆ ನನಗೆ ವಿಷ ಕೊಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಹಿರಂಗವಾಗಿ ಹೇಳಿದ್ದರೆ, ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳು ಪರಾಜಯಗೊಂಡ ಗ್ರಾಮಗಳಿಗೆ ನಾನು ಕಾಲಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಪಥ ಮಾಡಿದ್ದಾರೆ.!

ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲಬೇಕು ಎಂದು ತಾಕೀತು ಮಾಡಿರುವ ಮುಖ್ಯಮಂತ್ರಿಗಳು, ಒಂದು ವೇಳೆ ಯಾವುದೇ ಗ್ರಾಮದ ಬಿಜೆಪಿ ಅಭ್ಯರ್ಥಿ ಸೋತಲ್ಲಿ ನಾನು ಅಲ್ಲಿಗೆ ಕಾಲಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಶಿಕಾರಿಪುರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆ ನಮ್ಮ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಹಾಗಾಗಿ ಪ್ರತಿಯೊಬ್ಬರು ನಿಷ್ಠೆಯಿಂದ ದುಡಿಯುವ ಮೂಲಕ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಅವರು, ಅಪ್ಪ-ಮಕ್ಕಳಿಗೆ ಈ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ