ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅರಭಾವಿ ಅಭಿವೃದ್ಧಿ-ರಕ್ತದಲ್ಲಿ ಬರೆದುಕೊಡುವೆ: ಸಿಎಂ ನುಡಿ (BJP | Yeddyurappa | Congress | JDS, Election, Kumaraswamy)
Bookmark and Share Feedback Print
 
ಅರಭಾವಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವೆ ಎಂದು ನನ್ನ ರಕ್ತದಲ್ಲಿ ಬೇಕಾದರೆ ಬರೆದುಕೊಡುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆವೇಶದಿಂದ ನುಡಿದ ಘಟನೆ ಗುರುವಾರ ನಡೆದಿದೆ.

ಬೆಳಗಾವಿಯ ಕಲ್ಲೋಳಿಯಲ್ಲಿ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಹಾಗಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳು ಬಿಜೆಪಿ ಆಡಳಿತದಲ್ಲಿ ಇದ್ದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಬಹುದು ಎಂದು ಹೇಳಿದರು.

ಯಾವುದೇ ಕಾರಣಕ್ಕೂ ನಿಮ್ಮ ನಂಬಿಕೆ, ವಿಶ್ವಾಸಕ್ಕೆ ದ್ರೋಹ ಮಾಡುವಂತಹ ಕೆಲಸವನ್ನು ಈ ಯಡಿಯೂರಪ್ಪ ಮಾಡುವುದಿಲ್ಲ. ಅರಭಾವಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಹೊಣೆ ನನ್ನದು. ಆ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ಮುಗಿದ ನಂತರ ನಾನೇ ಖುದ್ದಾಗಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ವಿಪಕ್ಷಗಳು ಅನಾವಶ್ಯಕವಾಗಿ ಆರೋಪಿಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ. ಆದರೆ ನಾನು ರಾಜ್ಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡುತ್ತಿದ್ದೇನೆ. ಅದೇ ರೀತಿಯಲ್ಲಿ ಮುಂಬರುವ ಚುನಾವಣೆಯಲ್ಲಿ ನೀವು ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಶಾಸಕರಿಲ್ಲದೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಹಾಗಾಗಿ ಅರಭಾವಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುವ ಬಗ್ಗೆ ಮುಖ್ಯಮಂತ್ರಿಗಳು ಸಭೆಯಲ್ಲಿ ಈ ರೀತಿ ಭರವಸೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ