ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಂಗಾಪುರದಲ್ಲಿ ರೆಡ್ಡಿ ಕಂಪನಿ-ಮಾಹಿತಿ ಕೊಡಿ; ಸಿಎಂಗೆ ಗವರ್ನರ್ (Singhapur | Bharaswaj | Janaradna Reddy | BJP | Yeddyurappa)
Bookmark and Share Feedback Print
 
ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರ ಎಲ್ಲ ವ್ಯವಹಾರಗಳ ಕುರಿತು ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ. ಆದರೆ ತನಗೆ ರಾಜ್ಯಪಾಲರಿಂದ ಯಾವುದೇ ಪತ್ರ ಬಂದಿಲ್ಲ ಆ ಬಗ್ಗೆ ಪರಿಶೀಲಿಸುವುದಾಗಿ ಪ್ರತಿಕ್ರಿಯಿಸಿದ್ದಾರೆ.

ಜನಾರ್ದನ ರೆಡ್ಡಿ ಸಿಂಗಾಪುರದಲ್ಲಿ ಕಂಪನಿಯೊಂದನ್ನು ಆರಂಭಿಸಿ, ಅದನ್ನು ಗಣಿಗಾರಿಕೆ ವ್ಯವಹಾರದಲ್ಲಿ ತೆರಿಗೆ ವಂಚನೆಗೆ ಬಳಸಿಕೊಂಡಿದ್ದಾರೆ ಎಂಬುದು ಇತ್ತೀಚೆಗೆ ನಡೆದ ಆದಾಯ ತೆರಿಗೆ ದಾಳಿಯಲ್ಲಿ ಪತ್ತೆಯಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲರು ಪತ್ರ ಬರೆದಿದ್ದಾರೆ.

ಬಳ್ಳಾರಿಯಲ್ಲಿ ಮೂವರು ಸಚಿವರಿಂದ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ದೂರುಗಳ ಬಹಳ ಹಿಂದೆಯೇ ನನಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಮೂವರೂ ಸಚಿವರ ಆರ್ಥಿಕ ವ್ಯವಹಾರಗಳ ಕುರಿತು ಮಾಹಿತಿ ಒದಗಿಸುವಂತೆ 2010ರ ಫೆಬ್ರುವರಿ ಮತ್ತು ಏಪ್ರಿಲ್‌ನಲ್ಲಿ ಎರಡು ಪತ್ರಗಳನ್ನು ಬರೆದಿದ್ದೆ. ಆದರೆ ನಿಮ್ಮ ಕಡೆಯಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಷ್ಟೇ ಅಲ್ಲ ಮುಖ್ಯಮಂತ್ರಿಯೂ ಸೇರಿದಂತೆ ಸರಕಾರದಲ್ಲಿ ಇರುವವರು ಅಧಿಕಾರ ದುರ್ಬಳಕೆ ಮತ್ತು ಸ್ವಜನ ಪಕ್ಷಪಾತ ನಡೆಸಿರುವ ಬಗ್ಗೆ ಆರೋಪಗಳು ಪದೇ ಪದೇ ಕೇಳಿಬರುತ್ತಿವೆ. ಸರಕಾರದಲ್ಲಿ ನಡೆದಿರುವ ಭೂ ಹಗರಣಗಳ ಬಗ್ಗೆ ಮಾಧ್ಯಮಗಳು ದಿನನಿತ್ಯ ವರದಿ ಪ್ರಕಟಿಸುತ್ತಿವೆ. ಈ ಬಗ್ಗೆಯೂ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಸೂಚಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ