ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಿಪಂ, ತಾಪಂ ಚುನಾವಣೆ ಅಖಾಡ; ಖಾತೆ ತೆರೆದ ಬಿಜೆಪಿ (BJP | Karnataka | State Politics | Election)
Bookmark and Share Feedback Print
 
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೊದಲ ಹಂತದ ಚುನಾವಣೆಗಾಗಿನ ಮತದಾನ ಪ್ರಕ್ರಿಯೆ ನಡೆಯುವ ಮೊದಲೇ ಆಡಳಿತಾರೂಢ ಬಿಜೆಪಿ ಪಕ್ಷ ಖಾತೆ ತೆರೆದಿದ್ದು, ಒಂದು ಜಿಲ್ಲಾ ಪಂಚಾಯಿತಿ ಹಾಗೂ ಐದು ತಾಲೂಕು ಪಂಜಾಯಿತಿ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಮೊದಲ ಹಂತದ ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಶನಿವಾರ ಅಂತ್ಯಗೊಂಡಿತ್ತು. ಇದರಂತೆ ಇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದರಿಂದ ಬಿಜೆಪಿ ಪಕ್ಷದ ಆರು ಅಭ್ಯರ್ಥಿಗಳ ಆಯ್ಕೆ ಸುಗಮವಾಯಿತು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿನ ಮಾಚೋಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ನಾಗರಾಜು ಮಂಗನಹಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ. ಹಾಗೆಯೇ ಯಲಹಂಕ ತಾಲೂಕು ಪಂಚಾಯ್ತಿ ವ್ಯಾಪ್ತಿಯ ಕೊಡಿಗೇಹಳ್ಳಿ ಕ್ಷೇತ್ರದಲ್ಲಿ ಪುಪ್ಪಾ ರಮೇಶ್, ಹೆಸರಘಟ್ಟ ಕ್ಷೇತ್ರದಲ್ಲಿ ವಸಂತ ಲಕ್ಷ್ಮಿ, ಮಾಚೋಹಳ್ಳಿ ಕ್ಷೇತ್ರದಲ್ಲಿ ಎನ್. ಜ್ಯೋತಿ, ಮಂಡೂರು ಕ್ಷೇತ್ರದಲ್ಲಿ ವನಜಾಕ್ಷಿ ಮತ್ತು ಕೋಲಾರ ಜಿಲ್ಲೆಯ ಬಂಗಾರಪೇಟೆ ಕ್ಷೇತ್ರದಲ್ಲಿ ಅಬುಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುವ 12 ಜಿಲ್ಲೆಗಳಲ್ಲಿ ಬಹಿರಂಗ ಪ್ರಚಾರಕ್ಕೆ ಚಾಲನೆ ದೊರಕಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ