ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಪ್ರಶ್ನಿಸಿದ ರೈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ರೈತರ ವಿರುದ್ಧ ಹೂಡಲಾದ ಮೂಕದ್ದಮೆಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಜೋರಾಗಿ ಕೂಗಿ ಹೇಳಿದ ರೈತನನ್ನು ಪೊಲೀಸರು ಬಂಧಿಸಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಪ್ರಚಾರಕ್ಕೆ ಗರಗ ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ ನೀಡಿದಾಗ, ರೈತನ ಗೋಳನ್ನು ಕೇಳಿದ ಮುಖ್ಯಮಂತ್ರಿಗಳು ಭಾಷಣಕ್ಕೆ ಅಡ್ಡಿ ಮಾಡುತ್ತಿಯಾ ಆತನನ್ನು ಹೊರಹಾಕಿ ಎಂದು ಪೊಲೀಸರಿಗೆ ಆದೇಶಿಸಿದರು.
ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿ, ಸ್ವಯಂ ದೂರು ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಲಾಯಿತು ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.