ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನವರಿ 6ರಿಂದ ಜಂಟಿ ಅಧಿವೇಶನ: ಸಂಪುಟ ನಿರ್ಧಾರ (BJP | Yeddyurappa | Bharadwj | Belagavi | Congress | JDS)
Bookmark and Share Feedback Print
 
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಜನವರಿ 6ರಿಂದ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮಾತನಾಡಲಿದ್ದಾರೆ.

ಈ ಮೊದಲು ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಬೆಳಗಾವಿ ಬದಲು ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸದ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯಪಾಲ ಭಾರದ್ವಾಜ್ ಅವರನ್ನು ಭೇಟಿ ಮಾಡಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಹ್ವಾನ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮಾಡಿರುವ ಆರೋಪಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಜನರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಜನವರಿ 4ರಂದು ಪ್ರಕಟವಾಗುವ ಫಲಿತಾಂಶ ಪ್ರತಿಪಕ್ಷಗಳ ನಾಯಕರ ಬಾಯಿಗೆ ಬೀಗ ಹಾಕಲಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ