ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಲ್ಲ ಹಗರಣಕ್ಕೂ ಸರಕಾರ ಉತ್ತರ ಕೊಡ್ಬೇಕು: ಜೇಟ್ಲಿ ತಾಕೀತು (BJP | Core committe | Election | Yeddyurappa | Arun Jaitly)
Bookmark and Share Feedback Print
 
ಶಾಸಕಾಂಗ ಮತ್ತು ಕಾರ್ಯಾಂಗದ ನಡುವೆ ಉತ್ತಮ ಸಂಬಂಧ ಇರಬೇಕಾದರೆ ಕಾರ್ಯಾಂಗದ ಮುಖ್ಯಸ್ಥರಾದ ರಾಜ್ಯಪಾಲರು ಸಂಯಮದಿಂದ ನಡೆದುಕೊಳ್ಳುವುದು ಬಹಳ ಒಳ್ಳೆಯದು ಎಂದು ಬಿಜೆಪಿ ನಾಯಕ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಪಾಲರು ಎಷ್ಟು ಸಂಯಮದಿಂದ ವರ್ತಿಸುತ್ತಾರೋ ಅಷ್ಟರ ಮಟ್ಟಿಗೆ ಸರಕಾರದ ಜತೆಗಿನ ಸಂಬಂಧ ಉತ್ತಮವಾಗಿರುತ್ತದೆ. ಅಲ್ಲದೇ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದು ಈ ಸಂದರ್ಭದಲ್ಲಿ ಹೇಳಿದರು.

ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಎಲ್ಲ ಹಗರಣಗಳೂ ವಿವರವಾಗಿ ಚರ್ಚೆಯಾಗಬೇಕು. ವಿರೋಧ ಪಕ್ಷಗಳು ಇದಕ್ಕೆ ಸಹಕಾರ ಕೊಡಬೇಕು. ಎಲ್ಲ ಹಗರಣಗಳಿಗೂ ಸರಕಾರ ಸೂಕ್ತ ಉತ್ತರ ಕೊಡಬೇಕು ಎಂದು ನಾನು ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇನೆ ಎಂದರು.

ಸಚಿವ ಜನಾರ್ದನ ರೆಡ್ಡಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಕೇಂದ್ರ ಸರಕಾರ ಸಿಬಿಐ ಅನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಅಲ್ಲದೇ ವಿರೋಧ ಪಕ್ಷಗಳನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ