ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಿಪಂ, ತಾಪಂ ರಾಜಕೀಯ ಭವಿಷ್ಯ; ನಾಳೆ ಮತ ಎಣಿಕೆ (karnataka | State politics | Election | Bangalore)
Bookmark and Share Feedback Print
 
ಗುಲ್ಬರ್ಗ ಜಿಲ್ಲೆಯ ಅಫಜಲಪುರ ತಾಲ್ಲೂಕು ಅಂಕಲಗಿಯ ಎರಡು ಮತ ಗಟ್ಟೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಮಂಗಳವಾರ ಮತ ಎಣಿಕೆ ನಡೆಯಲಿದೆ. ಇದರೊಂದಿಗೆ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಗುಲ್ಬರ್ಗ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಅಂಕಲಗಿಯ ಎರಡು ಮತಗಟ್ಟೆಗಳಲ್ಲಿ ಇಂದು (ಸೋಮವಾರ) ಮರು ಮತದಾನ ನಡೆಯುತ್ತಿದೆ. ಶನಿವಾರ ನಡೆದ ಮತದಾನ ಸಂದರ್ಭದಲ್ಲಿ ದುಷ್ಕರ್ಮಿಗಳು ವಿದ್ಯುನ್ಮಾನ ಮತಯಂತ್ರಗಳನ್ನು ಧ್ವಂಸ ಮಾಡಿದ ಹಿನ್ನೆಲೆಯಲ್ಲಿ ಇಲ್ಲಿ ಮರು ಮತದಾನ ನಡೆಯುತ್ತಿದೆ. ಇದರೊಂದಿಗೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಇಲ್ಲಿನ ಸೂಕ್ಷ್ಮ ಪ್ರದೇಶದಲ್ಲಿ ಬಿಗು ಪೊಲೀಸ್ ಭದ್ರತೆ ಕೈಗೊಳ್ಳುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಚುನಾವಣಾ ಆಯೋಗ ಆದೇಶಿಸಿದೆ.

ಮತದಾನ ಪ್ರಕ್ರಿಯೆಗಾಗಿ ಇದೀಗಲೇ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 1,013 ಜಿಲ್ಲಾ ಪಂಚಾಯತಿ ಕ್ಷೇತ್ರಗಳು ಮತ್ತು 3,659 ತಾಲ್ಲೂಕು ಪಂಚಾಯತಿ ಕ್ಷೇತ್ರಗಳಿಗೆ ಎರಡು ಹಂತವಾಗಿ ಚುನಾವಣೆ ನಡೆದಿತ್ತು.

ಮತ ಎಣಿಕೆಯ ಭಾಗವಾಗಿ ಎಲ್ಲ ಕ್ಷೇತ್ರಗಳ ವಿದ್ಯುನ್ಮಾನ ಯಂತ್ರಗಳನ್ನು 171 ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಇಡಲಾಗಿದೆ. ಮಂಗಳವಾರ ಬೆಳಗ್ಗೆ ಎಂಟಕ್ಕೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಎಲ್ಲ ರಾಜಕೀಯ ಪಕ್ಷಗಳು ಫಲಿತಾಂಶವನ್ನು ಭಾರಿ ನಿರೀಕ್ಷೆಯಿಂದ ಎದುರು ನೋಡುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ