ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪಸಭಾಧ್ಯಕ್ಷರ ಆಯ್ಕೆ; ಸದನದಲ್ಲಿ ಭಾರಿ ಗದ್ದಲ ಸಾಧ್ಯತೆ (Karnataka | Deputy Speaker | State Politics | Congress)
Bookmark and Share Feedback Print
 
ವಿಧಾನಸಭೆ ಉಪ ಸಭಾಧ್ಯಕ್ಷರ ಆಯ್ಕೆ ಇಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸದನದಲ್ಲಿ ಭಾರಿ ಗದ್ದಲ ಕೋಲಾಹಲ ಉಂಟಾಗುವ ಸಾಧ್ಯತೆಯಿದೆ.

ಡೆಪ್ಯೂಟಿ ಸ್ಪೀಕರ್ ಸ್ಥಾನವು ಬಿಜೆಪಿಯ ಯೋಗಿಶ್ ಭಟ್ ಪಾಲಾಗುವುದು ಬಹುತೇಕ ಖಚಿತವಾಗಿದೆ. ಅಲ್ಲದೆ ಯೋಗಿಶ್ ಅವಿರೋಧವಾಗಿ ಆಯ್ಕೆಯಾಗಲಿದ್ದು, ಅಧಿಕೃತ ಘೋಷಣೆ ಮಾತ್ರ ನಡೆಯಬೇಕಾಗಿದೆ.

ಉಪ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು. ಈ ಸಂದರ್ಭದಲ್ಲಿ ಯೋಗಿಶ್ ಭಟ್ ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಕೇವಲ ಅವರನ್ನು ಮಾತ್ರ ಅವಿರೋಧವಾಗಿ ಆಯ್ಕೆ ಮಾಡಬೇಕಾಗುತ್ತದೆ.

ಅನರ್ಹ ಶಾಸಕರ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಉಪ ಸಭಾಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಪ್ರಮುಖ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ. ಆದರೆ ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಅಧಿಕೃತ ಪತ್ರವು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗೆ ತಲುಪದ ಹಿನ್ನೆಲೆಯಲ್ಲಿ ಚುನಾವಣೆ ಎಂದಿನಂತೆ ನಡೆಯಲಿದೆ.

ಒಟ್ಟಿನಲ್ಲಿ ಯೋಗಿಶ್ ಭಟ್ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಆದರೆ ಸದನದಲ್ಲಿ ಪ್ರತಿಪಕ್ಷಗಳು ಭಾರಿ ಕೋಲಾಹಲ ಎಬ್ಬಿಸುವ ಸಾಧ್ಯತೆಯಿದೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ
ಸಂಬಂಧಿತ ಮಾಹಿತಿ ಹುಡುಕಿ