ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದೇವೇಗೌಡ 'ಕೈ'ಹಿಡಿದವರೆಲ್ಲ ಭಸ್ಮವಾಗಿದ್ದಾರೆ: ಸಿಎಂ ಕಿಡಿ (Deve gowda | BJP | Yeddyurappa | JDS | Congress | Election)
Bookmark and Share Feedback Print
 
' ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕೈ ಹಿಡಿದವರೆಲ್ಲ ಭಸ್ಮವಾಗಿ ಹೋಗಿದ್ದಾರೆ. ಅದೇ ರೀತಿ ಕಾಂಗ್ರೆಸ್ ಕೂಡ ಭಸ್ಮವಾಗಲಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ವಿಧಾನಮಂಡಲ ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕುರಿತಂತೆ ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಇತ್ತೀಚೆಗಷ್ಟೇ ನಡೆದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಹಣೆಬರಹ ರಾಜ್ಯದ ಜನರಿಗೆ ಗೊತ್ತಾಗಿದೆ. ಸುಮಾರು ಹತ್ತು ಜಿಲ್ಲೆಗಳಲ್ಲಿ ಜೆಡಿಎಸ್ ಅಸ್ತಿತ್ವವೇ ಇಲ್ಲ. ಹಾಗಾಗಿ ಇನ್ನು ಮುಂದೆ ನಾನು ಜೆಡಿಎಸ್ ಬಗ್ಗೆ ಮಾತನಾಡಲ್ಲ ಎಂಬುದಾಗಿಯೂ ಶಪಥ ಮಾಡಿದರು.

ರಾಜ್ಯದ 20 ಜಿಲ್ಲಾ ಪಂಚಾಯಿತಿಗಳಲ್ಲಿ ಬಿಜೆಪಿ ಅಧ್ಯಕ್ಷರಿರುತ್ತಾರೆ. ಜೆಡಿಎಸ್ ಅಪ್ರಸ್ತುತ. ಅವರ ಟೀಕೆ-ಟಿಪ್ಪಣಿಗಳಿಗೆ ರಾಜ್ಯದ ಜನರೇ ತಕ್ಕ ಉತ್ತರ ನೀಡಿದ್ದಾರೆ. ಇನ್ನು ಮುಂದೆಯೂ ನೀಡುತ್ತಾರೆ ಎಂಬ ವಿಶ್ವಾಸ ಇರುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ