ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೇಲ್ಮನೆ ಕಲಾಪದಲ್ಲಿ ಕೋಲಾಹಲವೆಬ್ಬಿಸಿದ 'ಶಿಖಂಡಿ' (Vidhana parishath | Nanayya | BJP | Yeddyurappa | Congress)
Bookmark and Share Feedback Print
 
ಈ ಶಿಖಂಡಿ ಸರಕಾರದ ವಿರುದ್ಧ ಯುದ್ಧ ಮಾಡಿ ಏನೂ ಪ್ರಯೋಜನವಿಲ್ಲ ಎಂಬ ಜೆಡಿಎಸ್ ನಾಯಕ ಎಂ.ಸಿ.ನಾಣಯ್ಯ ಅವರ ಹೇಳಿಕೆ ಸದನದಲ್ಲಿ ಗದ್ದಲ-ಕೋಲಾಹಲಕ್ಕೆ ಎಡೆಮಾಡಿಕೊಟ್ಟು ವಿಧಾನಪರಿಷತ್ ಕಲಾಪ ಮುಂದೂಡಿದ ಪ್ರಸಂಗ ಗುರುವಾರ ನಡೆಯಿತು.

ನಿಲುವಳಿ ಸೂಚನೆಗೆ ಪಟ್ಟು ಹಿಡಿದು ಪ್ರತಿಪಕ್ಷಗಳು ಧರಣಿ ನಡೆಸುತ್ತಿರುವ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಮಹಾಭಾರತ ನಮ್ಮ ಪವಿತ್ರ ಗ್ರಂಥ ಅದರಲ್ಲಿ ಭೀಷ್ಮ ಶಿಖಂಡಿ ಎದುರು ಯುದ್ಧ ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅದೇ ರೀತಿ ಈ ಶಿಖಂಡಿ ಸರಕಾರದ ಎದುರು ಹೋರಾಟ ಮಾಡಿದರೇನು ಫಲ ಎಂದು ವಾಗ್ದಾಳಿ ನಡೆಸಿದ್ದರು.

ಇದು ನಾನು ಪ್ರಸ್ತಾಪಿಸಿರುವ ವಿಷಯವಲ್ಲ, ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿ ಶೈಲೇಂದ್ರ ಕುಮಾರ್ ಅವರು ಈ ಸರಕಾರವನ್ನು ನಪುಂಸಕ ಎಂಬ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ನಾಚಿಕೆಯಾಗಬೇಕು ನಿಮಗೆ, ಮಾನ-ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಗುಡುಗಿದರು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ನಾಣಯ್ಯ ಮೇಲೆ ಮುಗಿಬಿದ್ದಾಗ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪ ನಡೆಯಿತು. 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಸುಪ್ರೀಂಕೋರ್ಟ್ ಪ್ರಧಾನಿ ಸಿಂಗ್ ಅವರನ್ನೂ ತರಾಟೆಗೆ ತೆಗೆದುಕೊಂಡಿದೆ ಎಂದು ವಿ.ಎಸ್.ಆಚಾರ್ಯ ತಿರುಗೇಟು ನೀಡಿದರು.

ನಂತರ ನಿಲುವಳಿ ಸೂಚನೆಗೆ ಅವಕಾಶ ನೀಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದವು. ಈ ಸಂದರ್ಭದಲ್ಲಿ ಸಭಾಪತಿ ಎಚ್.ಡಿ.ಶಂಕರಮೂರ್ತಿ ಸುಗಮ ಕಲಾಪ ನಡೆಯಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು ಪ್ರತಿಪಕ್ಷಗಳು ಸ್ಪಂದಿಸದಿದ್ದಾಗ ಕಲಾಪವನ್ನು ಮುಂದೂಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ