ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದ ಅಭಿವೃದ್ಧಿಗೆ ರಾಜ್ಯಪಾಲರೇ ಕಂಟಕ; ಈಶ್ವರಪ್ಪ ಕಿಡಿ (Iswarappa | BJP | Yeddyurappa | Delhi | Gadkari | Governor)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾನು ರಾಜ್ಯಪಾಲರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪನವರು, ರಾಜ್ಯದ ಅಭಿವೃದ್ಧಿಗೆ ರಾಜ್ಯಪಾಲರೇ ಕಂಟಕರಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಮಂಗಳವಾರು ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಹುದ್ದೆಗೆ ತಕ್ಕಂತೆ ವರ್ತಿಸುತ್ತಿಲ್ಲ. ಅವರು ವಿರೋಧ ಪಕ್ಷದ ನಾಯಕರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಪುನರುಚ್ಚರಿಸಿದರು.

ನಾನು ಈಗಾಗಲೇ ಹಲವು ಬಾರಿ ರಾಜ್ಯಪಾಲರ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದೇನೆ. ಆದರೂ ಅವರು ತಮ್ಮ ಧೋರಣೆಯಲ್ಲಿ ಬದಲಾವಣೆ ತಂದುಕೊಂಡಿಲ್ಲ. ಅವರು ವಿಪಕ್ಷಗಳ ಮಾತಿಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಅವರು ಹೇಳಿದಂತೆ ಕೇಳಿಕೊಂಡು ಆಡಳಿತಾರೂಢ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುತ್ತಾರೆ ಎಂದು ದೂರಿದರು.

ಇನ್ನು ಮುಂದಾದರು ರಾಜ್ಯಪಾಲರು ಹುದ್ದೆಗೆ ತಕ್ಕಂತೆ ವರ್ತಿಸಲಿ ಎಂದು ಸಲಹೆ ನೀಡಿರುವ ಈಶ್ವರಪ್ಪ, ಒಂದು ವೇಳೆ ವಿರೋಧ ಪಕ್ಷದ ಮುಖಂಡರಂತೆ ವರ್ತಿಸುವುದನ್ನು ಮುಂದುವರಿಸಿದರೆ ಪಕ್ಷದ ಮುಖಂಡರ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಮಾಜಿ ಪ್ರಧಾನಿ ದೇವೇಗೌಡರು ಕೂಡ ಅನಾವಶ್ಯಕವಾಗಿ ಸರಕಾರದ ವಿರುದ್ಧ ಆರೋಪ ಹೊರಿಸುತ್ತಿದ್ದಾರೆ. ಹಾಗಾಗಿ ಗೌಡರ ವಿರುದ್ಧ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ದೂರು ನೀಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಂಗಳವಾರ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು. ಆದರೆ ರಾಜ್ಯಪಾಲರ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ