ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಮ್ಮತಿ ನೀಡಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಸರಾಜ್ ಭಾರದ್ವಾಜ್ ಚಾರಿತ್ರ್ಯ ಹೀನ ರಾಜ್ಯಪಾಲ ಎಂದು ಆರೋಪಿಸಿದರು.
ಇಂತಹ ಸಾವಿರ ರಾಜ್ಯಪಾಲರೂ ಬಂದರೂ ಸರಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಮುಖ್ಯಮಂತ್ರಿ ಯಡ್ಡಿಯೂರಪ್ಪಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಸಿಎಂ ವಿರುದ್ಧ ಮೊಕದ್ದಮೆ ದಾಖಲಿಸಲು ಅನುಮತಿ ನೀಡುವ ಮೂಲಕ ರಾಜ್ಯಪಾಲರು ಕಾಂಗ್ರೆಸ್ ಏಜೆಂಟರಂತೆ ವರ್ತಿಸಿದ್ದಾರೆ. ಅವರ ಈ ಕ್ರಮ ಪೂರ್ಣ ರಾಜಕೀಯ ಪ್ರೇರಿತವಾಗಿದೆ ಎಂದು ಇದರಿಂದ ಸ್ಪಷ್ಟವಾಗಿದೆ ಎಂದು ಕಿಡಿ ಕಾರಿದರು.
ಯಡಿಯೂರಪ್ಪ ಆರು ಕೋಟಿ ಕನ್ನಡಿಗರಿಂದ ಆಯ್ಕೆಯಾದ ಮುಖ್ಯಮಂತ್ರಿ. ಅವರ ಕುರ್ಚಿ ಅಲುಗಾಡಿಸಲು ಯಾರಿಂದಲೇ ಸಾಧ್ಯವಿಲ್ಲ ಎಂದು ಹೇಳಿದರು.