ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂಗೆ ಕಪ್ಪುಬಾವುಟ; 50 ಜೆಡಿಎಸ್ ಕಾರ್ಯಕರ್ತರ ಸೆರೆ (Republic Day | BJP | JDS | BS Yeddyurappa)
Bookmark and Share Feedback Print
 
ಕ್ರಿಮಿನಲ್ ಮುಖ್ಯಮಂತ್ರಿಯಾಗಿರುವ ಬಿ.ಎಸ್. ಯಡಿಯೂರಪ್ಪ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಬಾರದು. ನೈತಿಕತೆಯುಳ್ಳ ಜಾಗದಲ್ಲಿ ಅವರು ಕಾಣಿಸಿಕೊಳ್ಳಬಾರದು ಎಂದು ಕಪ್ಪು ಬಾವುಟ ಪ್ರದರ್ಶಿಸಿದ 50ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಮುಖ್ಯಮಂತ್ರಿಯವರು ಆಗಮಿಸುತ್ತಿದ್ದಂತೆ 50ರಷ್ಟು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು. ಯಡಿಯೂರಪ್ಪ ವಿರುದ್ಧ ಧಿಕ್ಕಾರ ಕೂಗಿದರು.

ನೈತಿಕತೆ ಇಲ್ಲದವರು ಇಂತಹ ಕಾರ್ಯಕ್ರಮಗಳಿಂದ ದೂರ ಉಳಿಯಬೇಕು. ಅವರನ್ನು ಧ್ವಜಾರೋಹಣ ಮಾಡಲು ಅವಕಾಶ ನೀಡಬಾರದು. ರಾಜ್ಯಪಾಲರು ಸಂವಿಧಾನಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬಿಜೆಪಿ ಸರಕಾರವೇ ಅವರಿಗೆ ಅಡ್ಡಿ ಮಾಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಜ್ಯಪಾಲರ ವಿರುದ್ಧದ ಬಿಜೆಪಿ ಧೋರಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಆದರೂ ಕಪ್ಪು ಬಾವುಟಗಳನ್ನು ಕೈಯಲ್ಲಿ ಹಿಡಿದಿದ್ದ ಜೆಡಿಎಸ್ ಕಾರ್ಯಕರ್ತರು ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು.

ರಾಜ್ಯಪಾಲರಿಂದ ಧ್ವಜಾರೋಹಣ...
62ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಎಚ್.ಆರ್. ಭಾರದ್ವಾಜ್, ವಿವಿಧ ಪಡೆಗಳು, ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಭಾಷಣ ಮಾಡಿದರು.

ಭಾರೀ ಬಿಗಿ ಭದ್ರತೆ ಒದಗಿಸಲಾಗಿದ್ದ ಈ ಸಮಾರಂಭದಲ್ಲಿ ಮಾತನಾಡಿದ ರಾಜ್ಯಪಾಲರು, ರಾಷ್ಟ್ರ ರಕ್ಷಣೆಯಲ್ಲಿ ಹುತಾತ್ಮರಾದವರನ್ನು ನೆನಪಿಸಿಕೊಂಡರು. ಕಿತ್ತೂರು ಚೆನ್ನಮ್ಮ, ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣರನ್ನು ಸ್ಮರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ