ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದ ಅಭಿವೃದ್ಧಿ ಸರಕಾರದ ಮಂತ್ರವಾಗಿದೆ: ಸೋಮಣ್ಣ (Somanna | BJP | Yeddyurappa | Congress | JDS)
Bookmark and Share Feedback Print
 
ಶಾಂತಿ ಸೌಹಾರ್ದತೆಗೆ ಭಂಗ ತರುವ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯಲು ಒಗ್ಗಟ್ಟು ಪ್ರದರ್ಶನ ಅವಶ್ಯವಾಗಿದೆ ಎಂದು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ 62ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ ಪಡೆದ ಬಳಿಕ ಅಭಿವೃದ್ಧಿಯ ಮುಂಚೂಣಿಯಲ್ಲಿರುವ ದೇಶಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆಯಾಗಿದೆ ಎಂದರು.

ಸನಾತನ ಸಂಸ್ಕೃತಿ, ತತ್ವಾದರ್ಶ, ಜೀವನ ಮೌಲ್ಯದ ವೈಶಿಷ್ಟ್ಯವನ್ನು ಹೊಂದಿರುವ ದೇಶದಲ್ಲಿ ಪ್ರತಿಭಾ ಸಂಪನ್ನತೆ ಇದೆ. ಮಾಹಿತಿ ತಂತ್ರಜ್ಞಾನ, ಕೈಗಾರಿಕೆ, ಕೃಷಿ, ರಕ್ಷಣೆ, ಸಾರಿಗೆ ಸಂಪರ್ಕದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ದೇಶದಲ್ಲಿ ನಾಡು ತನ್ನದೇ ಆದ ಪ್ರಗತಿಯಿಂದ ಎಲ್ಲರ ಗಮನ ಸೆಳೆದಿದೆ. ನಾಡಿನ ಸಮಗ್ರ ಅಭಿವೃದ್ಧಿಗೆ ಸರಕಾರ ಕಟಿಬದ್ಧವಾಗಿ ಕೆಲಸಮಾಡುತ್ತಿದೆ ಎಂದು ಹೇಳಿದರು.

ಅಭಿವೃದ್ಧಿ ಸರಕಾರದ ಮಂತ್ರವಾಗಿದ್ದು, ಸುಖ ಶಾಂತಿ ನೆಮ್ಮದಿಯಿಂದ ಎಲ್ಲರೂ ಬದುಕುವಂತಹ ವಾತಾವರಣ ನಿರ್ಮಾಣ ಸರಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಾಮಾನ್ಯ ಜನರ ಅಭ್ಯುದಯಕ್ಕಾಗಿ ಆರೋಗ್ಯ ಕವಚ, ಭಾಗ್ಯಲಕ್ಷ್ಮಿ ಯೋಜನೆ, ನಿರ್ಗತಿಕರಿಗೆ ಮಾಸಾಶನ, ವಸತಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಕಾಡಾನೆ ಸಮಸ್ಯೆ ನಿವಾರಣೆಗೆ ಶಾಶ್ವತ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಂದ ಶೀತಪೀಡಿತವಾಗಿರುವ ಗ್ರಾಮಗಳ ಸ್ಥಳಾಂತರ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜಿಲ್ಲಾ ವ್ಯಾಪ್ತಿಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ ಮತ್ತು ಇತರ ಸಂಪರ್ಕ ರಸ್ತೆಗಳನ್ನು ಅಭಿವೃದ್ದಿಪಡಿಸಲು ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ