ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 77ನೇ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆ ಆರಂಭ (Kannada sahithya sammelana | Venkata subbayya | Bangalore)
PR
ಉದ್ಯಾನನಗರಿಯಲ್ಲಿ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಗರದ ಕಾರ್ಪೋರೇಷನ್ ವೃತ್ತದಿಂದ ಹೊರಟು, ಸಮ್ಮೇಳನ ನಡೆಯಲಿರುವ ಬಸವನಗುಡಿ ನ್ಯಾಷನಲ್ ಮೈದಾನ ಕಾಲೇಜು ಮೈದಾನ ತಲುಪಲಿದೆ.

ಶುಕ್ರವಾರದಿಂದ ಮೂರು ದಿನಗಳ ಕಾಲ ರಾಜಧಾನಿಯಲ್ಲಿ ಅಕ್ಷರ ಜಾತ್ರೆ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಪ್ರಮುಖ ರಸ್ತೆಗಳಲ್ಲಿ ಕನ್ನಡ ಬಾವುಟ ರಾರಾಜಿಸುತ್ತಿದೆ. ಹಸಿರು ತೋರಣ, ಹೂಮಾಲೆಗಳು ಹಬ್ಬದ ಸಿರಿಯನ್ನು ದುಪ್ಪಟ್ಟುಗೊಳಿಸಿದೆ. ಇದೀಗ ಸಮ್ಮೇಳನ ನಡೆಯಲಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯತ್ತ ಮೆರವಣಿಗೆ ಸಾಗುತ್ತಿದೆ.

ಸಮ್ಮೇಳನಾಧ್ಯಕ್ಷ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರನ್ನು ಬಿಬಿಎಂಪಿ ಕೇಂದ್ರ ಕಚೇರಿಯಿಂದ ಮೆರವಣಿಗೆ ಮೂಲಕ ಕರೆತರಲಾಗುತ್ತಿದೆ. ಮೆರವಣಿಗೆ ಆರಂಭಕ್ಕೂ ಮುನ್ನ ಪ್ರೊ.ಜಿವಿ ಅವರು ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಸಮ್ಮೇಳನಕ್ಕೆ ರಾಜ್ಯ ಹಾಗೂ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ ಗಡಿನಾಡ ಕನ್ನಡಿಗರು ಪಾಲ್ಗೊಳ್ಳುತ್ತಿದ್ದಾರೆ. ಅತಿಥಿಗಳಿಗೆ ಮಾಹಿತಿ ನೀಡಲು ನಗರದ ವಿವಿಧ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ.

ಬಿಗಿ ಭದ್ರತೆ:ಸಮ್ಮೇಳನಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು, ನಗರ ಸಶಸ್ತ್ರ ಪೊಲೀಸ್ ಮೀಸಲು ಪಡೆ, ಸಿವಿಲ್ ಪೊಲೀಸ್, ಕೆಎಸ್ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು, ಮೆರವಣಿಗೆ ಮಾರ್ಗದಲ್ಲಿ ಸಂಚಾರ ಪೊಲೀಸರು ವಾಹನಗಳ ನಿಯಂತ್ರಣ ಉಸ್ತುವಾರಿ ವಹಿಸಿದ್ದಾರೆ.

ಟ್ರಾಫಿಕ್ ಜಾಮ್:ನಗರದ ಕಾರ್ಪೋರೇಷನ್ ವೃತ್ತದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹೊರಟ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರು ಕಿರಿಕಿರಿ ಅನುಭವಿಸುವಂತಾಗಿದೆ. ಆದರೆ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶಾಲಾ-ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿತ್ತು.
ಇವನ್ನೂ ಓದಿ