ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಾಲಪ್ಪ ಕಾಮ ಪುರಾಣ ಸಿಬಿಐಗೆ ಒಪ್ಪಿಸಲು ಭಯವೇಕೆ?:ಹೈಕೋರ್ಟ್ (Halappa | High court | Rape case | CBI | BJP | Govt)
NRB
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್ ಒಲವು ವ್ಯಕ್ತಪಡಿಸಿದ್ದು, ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಸತ್ಯಾತೆ ಹೊರಬೀಳಲಿದೆ ಎಂದು ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.

ಹರತಾಳು ಹಾಲಪ್ಪ ಅವರು ಶಿವಮೊಗ್ಗದ ಚಂದ್ರಾವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ವಿವಾದ ಹುಟ್ಟುಹಾಕಿತ್ತು. ಅಲ್ಲದೇ ಪ್ರಕರಣದಲ್ಲಿ ಸಾಕಷ್ಟು ನಾಟಕೀಯ ಬೆಳವಣಿಗೆ ನಡೆದಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಆದರೆ ಆಯೋಗದ ಶಿಫಾರಸಿಗೆ ಸರಕಾರ ತಡೆಯಾಜ್ಞೆ ಕೋರಿತ್ತು.

ಆ ನಿಟ್ಟಿನಲ್ಲಿ ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಖೇಹರ್ ಅವರನ್ನೊಳಗೊಂಡ ಪೀಠ, ಹಾಲಪ್ಪ ಅವರು ತಪ್ಪು ಮಾಡದಿದ್ದರೆ ಸಿಬಿಐ ತನಿಖೆಗೆ ಭಯವೇಕೆ ಎಂದು ಸರಕಾರವನ್ನು ಪ್ರಶ್ನಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಲು ಪ್ರಬಲ ಕಾರಣ ಏನು ಎಂಬುದನ್ನು ಮಾರ್ಚ್ 8ರೊಳಗೆ ಕಾರಣ ತಿಳಿಸುವಂತೆ ಆದೇಶ ನೀಡಿದೆ.

ಅತ್ಯಾಚಾರ ಪ್ರಕರಣದ ಕುರಿತಂತೆ ತಮಗೆ ನ್ಯಾಯ ಒದಗಿಸುವಂತೆ ಕೋರಿ ಚಂದ್ರಾವತಿ ಅವರು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದ್ದರು. ಆ ನಿಟ್ಟಿನಲ್ಲಿ ಆಯೋಗ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆ ಸೂಕ್ತ ಎಂದು ಶಿಫಾರಸು ಮಾಡಿತ್ತು. ಆದರೆ ಸರಕಾರ ಅದಕ್ಕೆ ತಡೆಯಾಜ್ಞೆ ಕೋರಿತ್ತು. ಆ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕು ಸರಕಾರದ ನಿಲುವಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.
ಇವನ್ನೂ ಓದಿ