ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ನಾಯಕರ ಬಣ್ಣ ಸಂಸತ್‌ನಲ್ಲಿ ಬಯಲು ಮಾಡ್ತೇನೆ: ಗೌಡ (BJP | Deve gowda | Yeddyurappa | JDS | Real estate | Congress)
PTI
ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರು ಭೂಮಿ ಕಳೆದುಕೊಂಡರು ಕೂಡ ಆಡಳಿತಾರೂಢ ಸರಕಾರ ಏನೂ ಮಾಡುತ್ತಿಲ್ಲ. ಆದರೆ ರಿಯಲ್ ಎಸ್ಟೇಟ್ ನಡೆಸುತ್ತಿರುವವರನ್ನು ಮಾತ್ರ ಕೇಳುವವರೇ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ವಿವಿಧ ಸಮಾನ ಮನಸ್ಕ ಪಕ್ಷಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಸ್ವಾರ್ಥ, ರಾಜಕೀಯ ಲಾಭಕ್ಕಾಗಿ ಹೋರಾಟ ಮಾಡುತ್ತಿಲ್ಲ. ಬಡವರ ಬದುಕಿನಲ್ಲಿ ನೆಮ್ಮದಿ, ಸುಧಾರಣೆ ಕಾಣಬೇಕೆಂಬ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರು. ಎರಡು ರಾಷ್ಟ್ರೀಯ ಪಕ್ಷಗಳ ನೀತಿಯಿಂದ ಬಡವರು ಕಂಗಾಲಾಗಿದ್ದಾರೆ. ಹಾಗಾಗಿ ನಾವು ಯಾವುದೇ ವ್ಯಕ್ತಿಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಬಡ ಜನರ ಪರವಾಗಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಅಲ್ಲದೇ ದೇವೇಗೌಡ ಅಥವಾ ಪಕ್ಷವನ್ನು ನಾಶ ಮಾಡುತ್ತೇವೆ ಅಂತ ಹೇಳುವ ಜನ ಹಿಂದೆಯೂ ಇದ್ದರು. ಈಗಲೂ ಇದ್ದಾರೆ. ಆದರೆ ಅದಕ್ಕೆಲ್ಲ ಈ ದೇವೇಗೌಡ ಸೊಪ್ಪು ಹಾಕುವುದಿಲ್ಲ. ರಾಜ್ಯದಲ್ಲಿ ರೈತರ ಬದುಕು ಚಿಂತಾಜನಕ ಸ್ಥಿತಿಯಲ್ಲಿದ್ದರೂ ಕೂಡ, ರಿಯಲ್ ಎಸ್ಟೇಟ್ ದಂಧೆ ಮುಂದುವರಿದಿದೆ. ಆದರೂ ನಮ್ಮ ಹೋರಾಟಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆ ನಮಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಷ್ಟೇ ಅಲ್ಲ ಬಿಜೆಪಿ ನಾಯಕರ ಬಣ್ಣವನ್ನು ಸಂಸತ್‌ನಲ್ಲಿ ಬಯಲು ಮಾಡುತ್ತೇನೆ. ಇವರೇನು ಸತ್ಯ ಹರಿಶ್ಚಂದ್ರರಲ್ಲ. ಯಡಿಯೂರಪ್ಪ ವಿಚಾರದಲ್ಲಿ ಹೈಕಮಾಂಡ್ ಸೋತು ಸುಣ್ಣವಾಗಿ ಮಲಗಿದೆ. ಬಿಜೆಪಿ ಪಾಲಿಗೆ ಯಡಿಯೂರಪ್ಪನವರೇ ಹೈಕಮಾಂಡ್ ಆಗಿದ್ದಾರೆ.
ಇವನ್ನೂ ಓದಿ