ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೈಂಗಿಕ ಕಿರುಕುಳ: ಪಿಎಚ್‌‌ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ (Sexual harrasment | manasa gangotri)
ಪ್ರಾಧ್ಯಾಪಕರೊಬ್ಬರು ಪಿ.ಎಚ್.ಡಿ ಓದುತ್ತಿರುವ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ್ದರಿಂದ, ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾನಸ ಗಂಗೋತ್ರಿಯಲ್ಲಿ ವರದಿಯಾಗಿದೆ.

ವಿಶ್ವ ವಿಖ್ಯಾತ ಮೈಸೂರ್ ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಜೀವಶಾಸ್ತ್ರ ವಿಭಾಗದ ಪ್ರೊ. ಶಿವಪ್ರಸಾದ್ ಎನ್ನುವ ಪ್ರಾಧ್ಯಾಪಕರು ಲೈಂಗಿಕ ಕಿರುಕುಳ ನೀಡುತ್ತಿದ್ದರಿಂದ, ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ವಿಪರೀತ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಅಸ್ವಸ್ಥಳಾಗಿದ್ದ ಈಕೆಯನ್ನು ಗಮನಿಸಿದ ಆಕೆಯ ಸಹಪಾಠಿಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ, ಪ್ರಾಧ್ಯಾಪಕ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಪೊಲೀಸರು ಹರಸಾಹಸ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.