ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರು (Air port | Bangalore | Cabinet meeting | BJP | Yeddyurappa)
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಅವರ ಹೆಸರು ಇಡುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಸೋಮವಾರ ಶಿಫಾರಸು ಮಾಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ತೀರ್ಮಾನ ಕೈಗೊಳ್ಳಲಾಯಿತು. ಅದೇ ರೀತಿ ಬೆಂಗಳೂರು-ತುಮಕೂರು ಹೆದ್ದಾರಿಗೆ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರು ಇಡುವಂತೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಯಿತು.

ಹೈ.ಕ. ವಿಶೇಷ ಸ್ಥಾನಮಾನ:
ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲು ಸರ್ವಪಕ್ಷಗಳ ನಿಯೋಗವನ್ನು ಕೊಂಡೊಯ್ಯುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದು ಕೇಂದ್ರಕ್ಕೆ ಸಮಿತಿ ಸಲ್ಲಿಸಬೇಕಾದ ಮನವಿ ಪತ್ರದ ಕರಡುಗೆ ಅನುಮೋದನೆ ನೀಡಲಾಗಿದೆ.

8ನೇ ತರಗತಿಯ ಮಕ್ಕಳಿಗೆ ಬೈಸಿಕಲ್ ವಿತರಿಸುವುದಕ್ಕೆ ಕೂಡ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿತು. ಮೊರಾರ್ಜಿ ವಸತಿ ಶಾಲೆಗಳ ಶಿಕ್ಷಕರನ್ನು ಖಾಯಂಗೊಳಿಸುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಇನ್ನುಳಿದಂತೆ ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆಗಳ ಪುನರುಜ್ಜೀವನಗೊಳಿಸುವ ಯೋಜನೆ ಶೀಘ್ರವೇ ಕೈಗೆತ್ತಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇವನ್ನೂ ಓದಿ