ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಇರೋವರೆಗೂ ಆಪರೇಶನ್ ಕಮಲ ಇರುತ್ತೆ: ಈಶ್ವರಪ್ಪ (BJP | Operation kamala | Yeddyurappa | Ishwarappa | JDS | Kumaraswamy)
'ನಾವು ಆಪರೇಷನ್ ಕಮಲ ನಡೆಸಿಯೇ ಇಲ್ಲ, ಅವರಾಗಿಯೇ ಬಿಜೆಪಿ ಸೇರುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವವರೆಗೆ ಆಪರೇಶನ್ ಕಮಲ ಮುಂದುವರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಗ್ಯಾರೇಜ್‌ಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದ ತತ್ವ, ಸಿದ್ದಾಂತ, ನಾಯಕತ್ವ ಒಪ್ಪಿಕೊಂಡು ಬರುವವರಿಗೆ ಬಿಜೆಪಿಯಲ್ಲಿ ಸದಾ ಸ್ವಾಗತವಿದೆ. ಅಲ್ಲದೇ ಬಿಜೆಪಿ ಅಸ್ತಿತ್ವದಲ್ಲಿ ಇರುವವರೆಗೂ ಆಪರೇಶನ್ ಕಮಲ ಇದ್ದೇ ಇರುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಜೆಡಿಎಸ್ ಶಾಸಕರು ವಜ್ರಗಳಿದ್ದಂತೆ ಎಂದು ಹೇಳುವ ಎಚ್.ಡಿ.ಕುಮಾರಸ್ವಾಮಿ, ವಜ್ರಗಳು ಕಮಲವಾಗಿ ಯಾಕೆ ಬದಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಲಿ. ಮನೆ ಯಜಮಾನ ಸರಿ ಇದ್ದರೆ ಎಲ್ಲರೂ ಸರಿಯಾಗಿಯೇ ಇರುತ್ತದೆ. ಇಲ್ಲದಿದ್ದರೆ ನಿಯಂತ್ರಣ ತಪ್ಪುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗಷ್ಟೇ ಕೊಪ್ಪಳದ ಶಾಸಕ ಸಂಗಣ್ಣ ಕರಡಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ವದಂತಿ ಇದೆಯಲ್ಲ ಎಂದು ಪತ್ರಕರ್ತರು ಈಶ್ವರಪ್ಪ ಅವರನ್ನು ಪ್ರಶ್ನಿಸಿದಾಗ, ಅದೆಲ್ಲ ನನಗೆ ಗೊತ್ತಿಲ್ಲ. ಆಪರೇಷನ್ ಕಮಲನಾ ಹಾಗಂದ್ರೆ ಏನು ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಇವನ್ನೂ ಓದಿ