ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರೈತರ ಏಳಿಗೆಗೆ ಸರಕಾರ ಕಟಿಬದ್ಧ: ಯಡಿಯೂರಪ್ಪ (Yadyurappa | Belagavi | World Kannada Meet | Karnataka)
ರೈತರ ಏಳಿಗೆಗೆ ರಾಜ್ಯ ಸರಕಾರ ಕಟ್ಟಿಬದ್ಧವಾಗಿದ್ದು, ಕೃಷಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದಿ.ಗೋಕಾಕ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್‌ನ ಶತಮಾನೋತ್ಸವ ಕಾರ್ಯಕ್ರಮದದಲ್ಲಿ ಮುಖ್ಯ ಆತಿಥಿಗಳಾಗಿ ಭಾವವಹಿಸಿದ್ದ ಸಿಎಂ ಈ ವಿಷಯವನ್ನು ಬಹಿರಂಗಪಡಿಸಿದರು. ಮಾತು ಮುಂದುವರಿಸಿದ ಸಿಎಂ, ಕೃಷಿಕರು ಸ್ವಾವಲಂಬಿ ಜೀವನ ನಡೆಸಲು ಮತ್ತಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಲಿದ್ದೇವೆ ಎಂದರು.

ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರಕಾರ ಕೃಷಿ ಬಜೆಟ್ ಮಂಡನೆ ಮಾಡಿದೆ. ಅಲ್ಲದೆ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಇದೇ ಜೂನ್-ಜುಲೈ ತಿಂಗಳಲ್ಲಿ ಕೃಷಿ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದರು.

ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಿದ ಸಿಎಂ, ಸುವರ್ಣ ಸೌಧ ನಿರ್ಮಾಣದ ಹಂತದಲ್ಲಿದೆ. ವಿಧಾನಮಂಡಲ ಅಧಿವೇಶನ ಜುಲೈನಲ್ಲಿ ಬೆಳಗಾವಿಯಲ್ಲಿ ನಡೆಯಲಿದೆ ಎಂದರು.
ಇವನ್ನೂ ಓದಿ