ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭಾರದ್ವಾಜ್‌ಗೆ ಸಿಎಂ ಹೋಳಿ 'ಶುಭಾಶಯ', ನಾಳೆ ದೆಹಲಿಗೆ (CM Yeddyurappa | Karnataka | BJP | Governor | Hansraj Bharadwaj | Holi)
ಪ್ರೇರಣಾ ಶಿಕ್ಷಣ ಸಂಸ್ಥೆಗೆ ದೇಣಿಗೆ ನೀಡಿರುವ ವಿಚಾರದಲ್ಲಿ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಪಕ್ಷಗಳು ಹಗರಣದ ಕೋಲಾಹಲ ನಡೆಸಿರುವ ಹಿನ್ನೆಲೆಯಲ್ಲಿ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಹೋಳಿ ಹಬ್ಬದ ಶುಭಾಶಯ ಕೋರಲು ಹಂಸರಾಜ್ ಭಾರದ್ವಾಜರನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾರೆ.

ಶುಕ್ರವಾರ ಎಚ್.ಡಿ.ರೇವಣ್ಣ, ಎಂ.ಸಿ.ನಾಣಯ್ಯ ಸಹಿತ ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ, ಪ್ರೇರಣಾ ಟ್ರಸ್ಟ್‌ಗೆ ವಂತಿಗೆ ಸಂಗ್ರಹಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವುದು ಇಲ್ಲಿ ಉಲ್ಲೇಖಾರ್ಹ.

ಭೇಟಿಗೆ ಊಹಾಪೋಹಗಳು, ರೆಕ್ಕೆಪುಕ್ಕಗಳು ಬಂದಿರುವ ಹಿನ್ನೆಲೆಯಲ್ಲಿ, ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರೊಂದಿಗೆ ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಿರುವುದಾಗಿಯೂ, ಅಭಿವೃದ್ಧಿ ಕಾರ್ಯಗಳ ಬಗ್ಗೆ ರಾಜ್ಯಪಾಲರು ಮೆಚ್ಚುಗೆ ಸೂಚಿಸಿರುವುದಾಗಿಯೂ ಹೇಳಿದರು.

ಭಾನುವಾರ ಸಂಜೆ ದೆಹಲಿಗೆ ತೆರಳಲಿದ್ದು, ಅಲ್ಲಿ ಕೇಂದ್ರ ಸಚಿವರಾದ ಶರದ್ ಪವಾರ್, ಪ್ರಣಬ್ ಮುಖರ್ಜಿ ಮತ್ತು ಜೈರಾಮ್ ರಮೇಶ್ ಜತೆ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾತುಕತೆ ನಡೆಸಲಾಗುತ್ತದೆ. ಬಳಿಕ ಸೋಮವಾರ ಪ್ರಧಾನಮಂತ್ರಿಯನ್ನು ಭೇಟಿಯಾಗಿ, ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ಒತ್ತಾಯ ಮಾಡಲಿರುವುದಾಗಿ ಮುಖ್ಯಮಂತ್ರಿ ಹೇಳಿದರು.

ಸೋಮವಾರ ಮತ್ತು ಮಂಗಳವಾರ ಎರಡು ದಿನವೂ ದೆಹಲಿಯಲ್ಲಿ ಹಿರಿಯ ಮುಖಂಡರು, ಮಂತ್ರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಯಡಿಯೂರಪ್ಪ ಹೇಳಿದರು.
ಇವನ್ನೂ ಓದಿ