ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪ ಚುನಾವಣೆ ನಂತ್ರ ಸಿಎಂ ಜೈಲಿಗೆ: ಪರಮೇಶ್ವರ್ ಭವಿಷ್ಯ (BJP | Yeddyurappa | KPCC | Parameshwar | By poll | Congress)
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆದ ನಂತರ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡು, ಭ್ರಷ್ಟಾಚಾರದ ಆರೋದಡಿಯಲ್ಲಿ ಜೈಲಿಗೆ ಹೋಗುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭವಿಷ್ಯ ನುಡಿದಿದ್ದಾರೆ.

ಸೋಮವಾರ ಬಂಗಾರಪೇಟೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿಯೇ 12 ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಜ್ಜೆಗೆಟ್ಟ ಮುಖ್ಯಮಂತ್ರಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪನವರೇ ಸಾರಥ್ಯ ವಹಿಸಿದ್ದಾರೆ ಎಂದರು.

ಮುಖ್ಯಮಂತ್ರಿ ವಿರುದ್ಧ ದಿನಕ್ಕೊಂದು ಹಗರಣ ಬಯಲಾಗುತ್ತಿದೆ. ಭ್ರಷ್ಟಾಚಾರದ ಪ್ರಕರಣದ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಕೆಲವು ನ್ಯಾಯಾಲಯದ ಕಟಕಟೆಯಲ್ಲಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೂ ಕೂಡ ಯಡಿಯೂರಪ್ಪ ಮಾನ-ಮರ್ಯಾದೆ ಇಲ್ಲದೆ ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಟೀಕಿಸಿದರು.

ಅರ್ಜಿ ನೀಡಿದವರಿಗೆಲ್ಲ ಕೋಟಿ, ಕೋಟಿ ಅನುದಾನ ನೀಡುತ್ತಿರುವ ಮುಖ್ಯಮಂತ್ರಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ಆಪರೇಶನ್ ಕಮಲದ ಮೂಲಕ ವಿರೋಧ ಪಕ್ಷದ ಸದಸ್ಯರನ್ನು ಸೆಳೆದುಕೊಂಡ ಪರಿಣಾಮ ಬಂಗಾರಪೇಟೆ, ಜಗಳೂರು ಹಾಗೂ ಚನ್ನಪಟ್ಟಣದಲ್ಲಿ ಏಪ್ರಿಲ್ 9ರಂದು ಮತ್ತೆ ಉಪಚುನಾವಣೆ ನಡೆಯುವಂತಾಗಿದೆ ಎಂದು ದೂರಿದರು.
ಇವನ್ನೂ ಓದಿ