ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೀಘ್ರವೇ ಅಕ್ರಮ ಗಣಿ ವರದಿ ಸಲ್ಲಿಕೆ: ಲೋಕಾಯುಕ್ತ (Lokayutha | Santhosh hegde | illigal mining | BJP | Yeddyurappa)
ಅಕ್ರಮ ಗಣಿಗಾರಿಕೆ ಕುರಿತಂತೆ ಕೇಂದ್ರ ಸರಕಾರ ನೇಮಕ ಮಾಡಿರುವ ಎಂ.ಬಿ.ಷಾ ಆಯೋಗ ಮಂಗಳವಾರ ಬೆಂಗಳೂರಿನಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದೆ.

ನಂತರ ಸುದ್ದಿಗಾರರ ಜತೆ ಮಾತನಾಡಿದ ಹೆಗ್ಡೆ, ಅಕ್ರಮ ಗಣಿಗಾರಿಕೆ ವರದಿಯನ್ನು ಶೀಘ್ರವೇ ಸರಕಾರಕ್ಕೆ ಸಲ್ಲಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಸಿಬಿಐ, ಸಿವಿಸಿಯಿಂದ ಮಾಹಿತಿ ಪಡೆಯಬೇಕಾಗಿರುವುದರಿಂದ ಎರಡನೆ ವರದಿ ಸಿದ್ದಪಡಿಸುವುದು ಸ್ವಲ್ಪ ತಡವಾಗಿದೆ. ಆದರೂ ಶೀಘ್ರ ವರದಿಯನ್ನು ನೀಡುವುದಾಗಿ ತಿಳಿಸಿದರು.

ಎಂ.ಬಿ.ಷಾ ನೇತೃತ್ವದ ಆಯೋಗ ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದರು. ದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಅದನ್ನು ತಡೆಗಟ್ಟಲು ಮಾರ್ಗೊಪಾಯ, ಅಕ್ರಮ ಗಣಿಗಾರಿಕೆಯಿಂದ ದೇಶಕ್ಕೆ ಹಾಗೂ ರಾಜ್ಯಕ್ಕೆ ಆಗುತ್ತಿರುವ ನಷ್ಟ ಇವುಗಳನ್ನು ಅಧ್ಯಯನ ಮಾಡಿ ಸಮಗ್ರ ವರದಿ ಸಲ್ಲಿಸಲು ಅನುಕೂಲವಾಗುವಂತೆ ಕೇಂದ್ರ ಸರಕಾರ 2010ರ ನವೆಂಬರ್‌ನಲ್ಲಿ ಎಂ.ಬಿ.ಷಾ ಆಯೋಗವನ್ನು ನೇಮಕ ಮಾಡಿತ್ತು.

ಈ ಆಯೋಗ ದೇಶದ ಎಲ್ಲಾ ರಾಜ್ಯಗಳಿಗೆ ಭೇಟಿ ಕೊಟ್ಟು ಅಲ್ಲಿ ಕಾನೂನು ಬದ್ದವಾಗಿ ನಡೆಯುತ್ತಿರುವ ಗಣಿಗಾರಿಕೆ, ಕಾನೂನು ಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆ, ರಫ್ತು ವಹಿವಾಟು, ಇದರಿಂದ ಬರುತ್ತಿರುವ ಆದಾಯ ಹಾಗೂ ನಷ್ಟದ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ.
ಇವನ್ನೂ ಓದಿ