ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇನ್ನೂ 50 ವರ್ಷ ಕಾಲ ರಾಜ್ಯದಲ್ಲಿ ಬಿಜೆಪಿ ಆಡಳಿತ: ಸಿಎಂ (BJP | Yeddyurappa | Congress | JDS | By poll | KPCC)
PTI
ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆಯ ಪ್ರಚಾರ ರಂಗೇರತೊಡಗಿರುವ ನಡುವೆಯೇ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ವಾಗ್ದಾಳಿ ಮುಂದುವರಿದಿದ್ದು, ಕಾಂಗ್ರೆಸ್, ಜೆಡಿಎಸ್ ಎಷ್ಟೇ ಪಿತೂರಿ ಮಾಡಿದರೂ ಕೂಡ ರಾಜ್ಯದಲ್ಲಿ ಇನ್ನೂ 50 ವರ್ಷಗಳ ಕಾಲ ಬಿಜೆಪಿ ಸರಕಾರ ಆಡಳಿತ ನಡೆಸುವುದು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಈವರೆಗೂ 10 ವರ್ಷ, 25 ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿ, ಕಾಂಗ್ರೆಸ್, ಜೆಡಿಎಸ್ ಅನ್ನು ಪ್ರತಿಪಕ್ಷಗಳ ಸ್ಥಾನದಲ್ಲಿಯೇ ಕುಳಿತುಕೊಳ್ಳುವಂತೆಯೇ ಮಾಡುವುದಾಗಿ ಹೇಳುತ್ತಿದ್ದ ಮುಖ್ಯಮಂತ್ರಿಗಳು ಈಗ 50 ವರ್ಷ ಅಧಿಕಾರ ನಡೆಸುವುದಾಗಿ ಹೇಳಿ ಮತದಾರರಿಗೆ ಅಚ್ಚರಿ ಹುಟ್ಟಿಸಿದರು.

ಸೋಮವಾರ ಸಂಜೆ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸರಕಾರದ ಪ್ರಗತಿಯ ಹಾದಿಯನ್ನು ಹಾಳು ಮಾಡಲು ಯತ್ನಿಸುತ್ತಿರುವವರ ಕುತಂತ್ರ ನಡೆಯದು ಎಂದು ತಿರುಗೇಟು ನೀಡಿದರು. ಪ್ರತಿಪಕ್ಷಗಳು ಅನಾವಶ್ಯಕವಾಗಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿರುವುದಾಗಿ ದೂರಿದರು.

ಬಂಗಾರಪೇಟೆ, ಜಗಳೂರು ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು. ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ಕ್ಷೇತ್ರದ ಮತದಾರರು ಬಿಜೆಪಿಗೆ ಮತ ನೀಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಇವನ್ನೂ ಓದಿ