ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆರ್ಥಿಕ ಸ್ಥಿತಿ ಬಗ್ಗೆ ಬುರುಡೆ ಬಿಡ್ಬೇಡಿ: ಸಿಎಂಗೆ ಕಾಂಗ್ರೆಸ್ (BJP | Yeddyurappa | Congress | white paper | KPCC | Parameshwar)
ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಬುರುಡೆ ಬಿಡಬಾರದು. ಬಾಕಿ ಉಳಿಸಿಕೊಂಡಿದ್ದರೂ ಕೂಡ ಆರ್ಥಿಕ ಪರಿಸ್ಥಿತಿ ಸುಭದ್ರವೇ ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೂಡಲೇ ಶ್ವೇತಪತ್ರ ಹೊರಡಿಸಬೇಕೆಂದು ಒತ್ತಾಯಿಸಿದ್ದಾರೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಆರ್ಥಿಕ ಸ್ಥಿತಿ ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿದಲ್ಲಿ ಅತ್ಯುತ್ತಮವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ ವಾಸ್ತವಿಕ ಪರಿಸ್ಥಿತಿ ಬೇರೆಯಾಗಿದೆ ಎಂದರು.

ರಾಜ್ಯದ ಗುತ್ತಿಗೆದಾರರಿಗೆ ಸುಮಾರು ಆರು ಸಾವಿರ ಕೋಟಿ ರೂಪಾಯಿ ಹಣವನ್ನು ಲೋಕೋಪಯೋಗಿ ಇಲಾಖೆಯಲ್ಲೇ ಬಾಕಿ ಕೊಡಬೇಕಾಗಿದೆ. ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆದಾರರಿಗೆ 3,500 ಕೋಟಿ ರೂ.ಹಣ ಪಾವತಿ ಮಾಡದೆ ಇರುವುದರಿಂದ ನಾವು ಯಾವುದೇ ಹೊಸ ಕೆಲಸ ಮಾಡುವುದಿಲ್ಲ ಎಂದು ಗುತ್ತಿಗೆದಾರರು ಪಾಲಿಕೆ ಕಚೇರಿ ಮುಂದೆ ಧರಣಿ ಮಾಡಿದ್ದಾರೆ. ಸ್ವತಃ ಆಯುಕ್ತರೇ ನಗರಪಾಲಿಕೆಯಲ್ಲಿ ಒಂದು ಕೋಟಿಗಿಂತ ಹೆಚ್ಚಿನ ಹಣ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾದರೆ ಇದೆಲ್ಲ ಏನು ಎಂದು ಪ್ರಶ್ನಿಸಿದ್ದಾರೆ.

ಸರಕಾರ ಬಿಬಿಎಂಪಿಗೆ 1,300 ಕೋಟಿ ರೂ.ಕೊಡುವುದಾಗಿ ಹೇಳಿದ್ದು, ಇದು ಕೂಡ ಮುಖ್ಯಮಂತ್ರಿಯವರ ಸುಳ್ಳು ಭರವಸೆಗಳಲ್ಲಿ ಒಂದಾಗಿದೆ. ಕರ್ನಾಟಕದ ಅಭಿವೃದ್ಧಿಯನ್ನು ದೇವರ ಪಾಲಿಗೆ ಬಿಟ್ಟು, ದೇವಾಲಯ, ಯಾತ್ರೆಯಲ್ಲಿ ಕಾಲಕಳೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಿಂಗಳಿಗೆ ನಾಲ್ಕು ದಿನಗಳು ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ತಿರುಗೇಟು ನೀಡಿದರು.
ಇವನ್ನೂ ಓದಿ