ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಯಲ್ಲಿ ಭಿನ್ನಮತವಿಲ್ಲ, ಅಸಮಾಧಾನವಿದೆ: ಈಶ್ವರಪ್ಪ (BJP | Ishwarappa | Ananth kumar | Yeddyurappa | Dispute | Congress)
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆದ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಮತ್ತೆ ಭಿನ್ನಮತ ಆರಂಭಗೊಂಡಿದ್ದು, ಮಂಗಳವಾರ ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಸಂಸದ ಅನಂತ್ ಕುಮಾರ್ ಹಾಗೂ ಕೆಲವು ಶಾಸಕರು ರಹಸ್ಯ ಸಭೆ ನಡೆಸಿದ್ದರು. ಆದರೆ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ಅಸಮಾಧಾನ ಇರುವುದು ಸತ್ಯ ಎಂಬುದಾಗಿ ಈಶ್ವರಪ್ಪ ಹೇಳುವ ಮೂಲಕ ದ್ವಂದ್ವ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಪಕ್ಷದಲ್ಲಿ ಮತ್ತೆ ಭಿನ್ನಮತದ ಸಭೆ ನಡೆಯುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ನಾವು ಯಾವುದೇ ಸಭೆ ನಡೆಸಿಲ್ಲ. ಹಾಗಂತ ಪಕ್ಷದಲ್ಲಿನ ಸಮಸ್ಯೆ ಎಲ್ಲವೂ ಇತ್ಯರ್ಥವಾಗಿದೆ ಎಂದು ಸುಳ್ಳು ಹೇಳಲ್ಲ. ಇದೊಂದು ರಾಜಕೀಯ ಪಕ್ಷ, ಹಾಗಾಗಿ ಸಣ್ಣಪುಟ್ಟ ಸಮಸ್ಯೆ ಬಂದೇ ಬರುತ್ತದೆ ಎಂದರು.

ಬಿಜೆಪಿಯಲ್ಲಿ ಕೆಲವು ಶಾಸಕರಿಗೆ ಅಸಮಾಧಾನ ಇರುವುದು ಸತ್ಯ. ಆದರೆ ಯಾವುದೇ ಭಿನ್ನಮತವಿಲ್ಲ. ಪಕ್ಷದಲ್ಲಿ ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಅಸಮಾಧಾನದ ಬಗ್ಗೆ ಪಕ್ಷದ ವರಿಷ್ಠರೇ ಆಗಮಿಸಿ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬುದಾಗಿಯೂ ಈಶ್ವರಪ್ಪ ಹೇಳಿದರು.

ಏತನ್ಮಧ್ಯೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಅವರೆಲ್ಲ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ. ಭಿನ್ನಮತ, ಗೊಂದಲ ಕೇವಲ ಮಾಧ್ಯಮ ಮತ್ತು ಪ್ರತಿಪಕ್ಷಗಳ ಸೃಷ್ಟಿ ಎಂದು ಗೂಬೆ ಕೂರಿಸಿದರು.
ಇವನ್ನೂ ಓದಿ