ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿಗಾರಿಕೆ ಸಿಬಿಐಗೊಪ್ಪಿಸಿ: ಸಿದ್ದು, ರೇವಣ್ಣ (Yaddyurappa | Illegal Mining | Revanna | Siddaramaiah)
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ರಾಜ್ಯ ಸರಕರಾರಕ್ಕೆ ನೋಟಿಸ್ ನೀಡಿರುವ ಹಿನ್ನಲೆಯಲ್ಲಿ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೊಪ್ಪಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ಎಚ್.ಡಿ. ರೇವಣ್ಣ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಸರಕಾರ ಅಕ್ರಮ ಗಣಿಗಾರಿಕೆಯಲ್ಲಿ ಅನೇಕ ಕೋಟಿಗಳ ಅವ್ಯವಹಾರ ನಡೆಯುತ್ತಿದೆ. ಆದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಸಿದ್ದು ಆಗ್ರಹಿಸಿದರು.

ಮತ್ತೊಂದೆಡೆ ಹೇಳಿಕೆ ನೀಡಿರುವ ರೇವಣ್ಣ, ಈ ಹಿಂದೆಯೇ ರಾಜ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಾಯುಕ್ತ ಸಂತೋಷ್ ಹೆಗ್ಡೆ ವರದಿ ನೀಡಿದ್ದರೂ, ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ಇದೀಗ ಲೋಕಾಯುಕ್ತರ ವರದಿ ಆಧರಿಸಿದ ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಪ್ರಕರಣ ಸಮಗ್ರವಾಗಿ ತನಿಖೆ ನಡೆಸಲು ಸಿಬಿಐಗೆ ಒಪ್ಪಿಸಬೇಕು ಎಂದವರು ಒತ್ತಾಯಿಸಿದರು.

ಮಾತು ಮುಂದುವರಿಸಿದ ರೇವಣ್ಣ, ಒಂದು ವೇಳೆ ಮುಖ್ಯಮಂತ್ರಿಗಳ ಕೈವಾಡ ಇಲ್ಲವೇ ಆದ್ದಲ್ಲಿ ಮತ್ಯಾಕೆ ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಇವನ್ನೂ ಓದಿ