ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದಲ್ಲಿ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ ಮಿತಿಮೀರಿದೆ: ರಾಹುಲ್ (Rahul gandhi | Congress | Bjp | Corruption)
PTI
ರಾಜ್ಯದಲ್ಲಿ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ ಮಿತಿಮೀರಿದ್ದು, ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಯಲ್ಲಿ ಅಧಿಕಾರ ತರಲು ಶ್ರಮಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಕಾಂಗ್ರೆಸ್ಸಿಗರಿಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ, ಬೆಂಗಳೂರು ನಗರವನ್ನು ಸಿಲಿಕಾನ್ ವ್ಯಾಲಿಯಾಗಿ ಮಾರ್ಪಡಿಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದೆ. ಇದೀಗ ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ, ಕರ್ನಾಟಕ ಮುಂಚೂಣಿಯಲ್ಲಿದೆ ಎಂದರು.

ಉಡುಪಿ ಭೇಟಿಯ ನಂತರ ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ, ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದೆ.ಇಂತಹ ಭ್ರಷ್ಟ ಸರಕಾರವನ್ನು ಅಧಿಕಾರದಿಂದ ದೂರವಿಡಲು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವಂತೆ ಕೋರಿದರು.

ಕಾರ್ಯಕರ್ತರ ಸಭೆಯಲ್ಲಿ ರಾಹುಲ್‌ ಮಾತನಾಡಿ, ಅಕ್ರಮ ಗಣಿಗಾರಿಕೆ ಸೇರಿದಂತೆ ಅವ್ಯವಹಾರಗಳಲ್ಲಿ ಮುಳುಗಿರುವ ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನ ಗಳಿಸಿದ್ದು, ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಆಪಾದಿಸಿದರು.

ರಾಹುಲ್‌ ಉಡುಪಿಗೆ ಆಗಮಿಸಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವಲ್ಲಿ ಯಶಸ್ವಿಯಾದರು.

ರಾಹುಲ್ ಭೇಟಿಗೆ ಅವಕಾಶ ನಿರಾಕರಿಸಿದ ಪೊಲೀಸರ ವಿರುದ್ಧ, ಮಾಧ್ಯಮಗಳ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆ ಕೂಡಾ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂತನವಾಗಿ ಬಿಡುಗಡೆ ಮಾಡಲಾದ ಕೆಪಿಸಿಸಿ ಪಟ್ಟಿಯಲ್ಲಿ ನಿಷ್ಠಾವಂತರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರು, ರಾಹುಲ್ ಗಾಂಧಿಯವರಿಗೆ ದೂರು ಸಲ್ಲಿಸಲು ಪ್ರಯತ್ನಿಸಿದರು. ಆದರೆ, ಪೊಲೀಸರ ಬಿಗಿ ಭದ್ರತೆಯಿಂದಾಗಿ ಕಾರ್ಯಕರ್ತರು ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದರು.

ಒಂದು ದಿನದ ರಾಜ್ಯ ಪ್ರವಾಸಕ್ಕೆ ಆಗಮಿಸಿದ ರಾಹುಲ್‌ ಗಾಂಧಿ ಅವರನ್ನು, ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್‌ ಹಾಗೂ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ಬರಮಾಡಿಕೊಂಡರು.
ಇವನ್ನೂ ಓದಿ